Advertise

14 June 2026

15.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.06.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರಬಹುದು. ಉತ್ತರ ಕನ್ನಡ ಜಿಲ್ಲೆಯಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜೂನ್ 20ರ ತನಕ ಇದೇ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜೂನ್ 20ರ ತನಕ ಇದೇ ವಾತಾವರಣ ಮುಂದುವರಿಯ ಸಾಧ್ಯತೆಗಳಿವೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜೂನ್ 18ರಿಂದ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಜೂನ್ 20ರ ತನಕ ಈ ಅಲ್ಲಲ್ಲಿ ಮಳೆಯ ವಾತಾವರಣ ಮುಂದುವರಿಯಲಿದ್ದು ನಂತರ ಕಡಿಮೆಯಾಗಬಹುದು.

ಎಲ್ನಿನೋ ಜೂನ್ ತಿಂಗಳ ಕೊನೆಯಲ್ಲಿ ಆರಂಭವಾಗುವ ವರದಿಗಳದ್ದು, ಸುಮಾರು ನವೆಂಬರ್ ತಿಂಗಳಲ್ಲಿ ಮಧ್ಯ ತೀವ್ರ ಸ್ವರೂಪ ಪಡೆದುಯುವ ಸೂಚನೆಗಳಿವೆ. 
ಈ ಸಲದ ಮುಂಗಾರು ದುರ್ಬಲವಾಗಿರುವುದರಿಂದ ಬರುತ್ತಿರುವ ಮಳೆ ನೀರಿನ ಸಂಗ್ರಹ ಹಾಗೂ ಸಂಗ್ರಹ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ರೈತರು, ಕೃಷಿಕರು ಅಗತ್ಯ ಕ್ರಮ ಕೈಗೊಳ್ಳುವದು ಉತ್ತಮ. 

No comments:

Post a Comment

15.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.06.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್...