Advertise

17 June 2026

18.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


18.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂಜಾನೆ ಅಲ್ಲಲ್ಲಿ ಸ್ವಲ್ಪ ಮಳೆಯಾಗಿದೆ. ಕರಾವಳಿ ತೀರ ಭಾಗಗಳಲ್ಲಿ ಸ್ವಲ್ಪ ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ಬಿಸಿಲು, ಮೋಡ ಹಾಗೂ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಕರಾವಳಿಯ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜೂನ್ 21ರ ತನಕವೂ ಇದೇ ವಾತಾವರಣ ಮುಂದುವರಿಯುವ ಲಕ್ಷಣಗಳಿದ್ದು, 22ರಿಂದ ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಮುಂಗಾರು ಅಲ್ಪ ಚೇತರಿಕೆ ಕಾಣಬಹುದು.

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲು ಹಾಗೂ ಮೋಡದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 18ರಿಂದ ಒಂದೆರಡು ಮಳೆ ಹೆಚ್ಚಾಗುವ ಲಕ್ಷಣಗಳಿವೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜೂನ್ 21ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಚಾಮರಾಜನಗರ, ರಾಮನಗರ, ಬೆಂಗಳೂರು ನಗರ ಜೆಲ್ಲೆಗಳ ತಮಿಳುನಾಡು ಗಡಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದಂತೆ ಮೈಸೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಂಜೆ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.

ಎಲ್ ನಿನೋ ಆರಂಭವಾದ ಪರಿಣಾಮದಿಂದ ರಾಜ್ಯದಲ್ಲಿ ಜೂನ್ ತಿಂಗಳಿನಿಂದ ಸೆಪ್ಟೆಂಬರ್ ತನಕ ಭಾರಿ ಮಳೆಯ ಕೊರತೆ ಉಂಟಾಗುವ ವರದಿಗಳಿವೆ. 
ರೈತರು, ಕೃಷಿಕರು ಈಗ ಬೀಳುತ್ತಿರುವ ಅಲ್ಪ ಸ್ವಲ್ಪ ಮಳೆಯ ನೀರನ್ನು ಸಂಗ್ರಹಿಸಿಡುವ ಕಾರ್ಯಕ್ರಮ ರೂಪಿಸುವುದು ಒಳಿತು. 

No comments:

Post a Comment

18.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು,...