20 June 2026

21.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮಧ್ಯಾಹ್ನ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಒಂದೆರಡು ಕಡೆ ಸೀಮಿತ ಪ್ರದೇಶಗಳಲ್ಲಿ ಮಳೆ ಸ್ವಲ್ಪ ಹೆಚ್ಚಿರಬಹುದು.
ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ದುರ್ಬಲ ಮುಂಗಾರು ಮುಂದುವರಿಯಲಿದ್ದು, ಜೂನ್ 28ರಿಂದ ಅಲ್ಪ ಚೇತರಿಕೆ ಕಾಣಬಹುದು. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಸಣ್ಣ ಪ್ರಮಾಣದ ಗುಡುಗು ಸಾಧ್ಯತೆಯೂ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ. 
ಈಗಿನಂತೆ ಜೂನ್ 23ರ ತನಕ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯಲಿದ್ದು, ನಂತರ ಕಡಿಮೆಯಾದರೂ ಜೂನ್ 28ರಿಂದ ಮುಂಗಾರು ಅಲ್ಪ ಚೇತರಿಕೆ ಕಾಣಬಹುದು. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜೂನ್ 21ರಿಂದ ಮುಂಗಾರು ಮಳೆ ಆರಂಭವಾಗುವ ಮುನ್ಸೂಚನೆ ಇದೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಸಾಮಾನ್ಯ ಪ್ರಮಾಣದ ಗುಡುಗು ಸಾಧ್ಯತೆಯೂ ಇದೆ. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜೂನ್ 27ರ ತನಕ ಈ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಸಧ್ಯಕ್ಕೆ ಯಾವುದೇ ವಾಯುಭಾರ ಕುಸಿತ ಅಥವಾ ಚಂಡಮಾರುತದ ಉಂಟಾಗುವ ಸಾಧ್ಯತೆಗಳು ಕ್ಷೀಣಿಸುತ್ತಿರುವುದರಿಂದ ರಾಜ್ಯದಲ್ಲಿ ದುರ್ಬಲ ಮುಂಗಾರು ಮುಂದುವರಿಯಲಿದೆ. 
ಮುಂದಿನ ದಿನಗಳಲ್ಲೂ ಮಳೆಯ ಕೊರತೆ ಉಂಟಾಗುವ ಸಾಧ್ಯತೆಗಳಿರುವುದರಿಂದ ರೈತರು, ಕೃಷಿಕರು ಮಳೆ ನೀರಿನ ಕೊಯ್ಲು ಮಾಡಿ ಸಂಗ್ರಹಿಸಿಡವ ಕಾರ್ಯಕ್ರಮ ನಿರ್ವಹಿಸುವುದು ಒಂಳಿತು. 
 

No comments:

Post a Comment