Advertise

21 June 2026

22.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

22.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಕಡಿಮೆಯಾಗಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 22ರಿಂದ ಮುಂಗಾರು ಅಲ್ಪ ಚೇತರಿಕೆ ಕಾಣಬಹುದು. 24 ಸಾಮಾನ್ಯ ಮಳೆ ಆರಂಭವಾದರೆ, 26ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಶಿವಮೊಗ್ಗ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 27ರಿಂದ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿದ್ದು, ಅಲ್ಲಿಯ ತನಕ ಸಾಮಾನ್ಯ ಮಳೆ ಮುಂದುವರಿಯಲಿದೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ವಿಜಯಪುರ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಇರಬಹುದು.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜೂನ್ 22ರಿಂದ ಅಲ್ಲಲ್ಲಿ ಉತ್ತಮ ಮಳೆಯ ಸಾಧ್ಯತೆಗಳಿವೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜೂನ್ 22ರಿಂದ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಅರಬ್ಬಿ ಸಮುದ್ರದಲ್ಲಿ ಮುಂಗಾರು ಮಾರುತಗಳ ಚಲನೆಗೆ ಪೂರಕವಾದ ವಾತಾವರಣ ನಿರ್ಮಾಣವಾಗುತ್ತಲಿದ್ದು, ಜೂನ್ 26ರಿಂದ ಮುಂಗಾರು ಸ್ವಲ್ಪ ಚೇತರಿಕೆ ಕಾಣಬಹುದು.

No comments:

Post a Comment

22.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

22.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನ...