Advertise

23 June 2026

24.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


24.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ :  ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಮಳೆ ಮುಂದುವರಿಯಲಿದ್ದು, ಜೂನ್ 25ರಿಂದ ಮಳೆಯ ಪ್ರಮಾಣ ಹೆಚ್ಚಾಗಿ ಹಾಗೂ ಬಿಡುವಿನ ಅಂತರ ಕಡಿಮೆಯಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಈಗಿನ ಮಳೆಯು ಮುಂದುವರಿಯಲಿದ್ದು, ಜೂನ್ 25ರಿಂದ ಎಂದಿನಂತೆ ಮುಂಗಾರು ಮಳೆ ಆರಂಭವಾಗುವ ಸಾಧ್ಯತೆಗಳಿವೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಹಾವೇರಿ, ಗದಗ, ರಾಯಚೂರು, ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜೂನ್ 24 ರಿಂದ 26ರ ತನಕ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ದಾವಣಗೆರೆ, ವಿಜಯನಗರ, ಮೈಸೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ಉಳಿದ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಉತ್ತರ ಫಿಲಿಪ್ಪೀನ್ಸ್ ನಲ್ಲಿ ಉಂಟಾದ ಪ್ರಭಲ ಚಂಡಮಾರುತದ ಪರಿಣಾಮ ಬಂಗಾಳಕೊಲ್ಲಿಯ ಗಾಳಿಯು ಅತ್ತ ಸೆಳೆಯಲ್ಪಡುವುದರಿಂದ ಮುಂಗಾರು ಮಾರುತಗಳಿಗೆ ಉತ್ತಮ ಚಾಲನೆ ಸಿಗುವ ನಿರೀಕ್ಷೆ ಇದೆ. 

No comments:

Post a Comment

24.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :  ಕಾಸರಗೋಡು ಸೇರಿದಂತೆ ರಾ...