Advertise

28 June 2026

29.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

29.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ನಿನ್ನೆಯ ತನಕ ದುರ್ಬಲಗೊಂಡಿದ್ದ ಮುಂಗಾರು ಇವತ್ತು ಅಲ್ಪ ಚೇತರಿಕೆ ಯೊಂದಿಗೆ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಬೆಳಿಗ್ಗೆಯಿಂದಲೆ ಮಳೆಯಾಗುತ್ತಿದೆ. 
ಇವತ್ತು ಕಾಸರಗೋಡು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಸ್ವಲ್ಪ ಹೆಚ್ಚಿರಬಹುದು. ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳ ತನಕವೂ ಉತ್ತಮ ಮಳೆಯ ಮುನ್ಸೂಚನೆ ಇದೆ. ಜೂನ್ 29ರಿಂದ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಕಡಿಮೆಯಾಗಬಹುದು. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರಬಹುದು. ಮಳೆಯ ಅವಧಿಯೂ ಹೆಚ್ಚಿರಬಹುದು.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ಬಳ್ಳಾರಿ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜುಲೈ 1ರ ತನಕ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ನಂತರ ಕಡಿಮೆಯಾಗಬಹುದು.

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಮಧ್ಯಮ ಸ್ತರದಲ್ಲಿ ಜುಲೈ 1 ಅಥವಾ 2 ರಿಂದ ತಿರುವಿಕೆ ಉಂಟಾಗುವ ಸಾಧ್ಯತೆಗಳಿವೆ. 


No comments:

Post a Comment

12.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

12.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಮಧ್ಯಮ ಸ್ತರದಲ್ಲಿ ಗಾಳಿಯ...