Advertise

31 July 2026

01.08.2027ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

01.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಗಾಳಿಯೊಂದಿಗೆ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಆಗಸ್ಟ್ 1ರ ತನಕ ಈ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. 2ನೇ ತಾರೀಕಿನಿಂದ ಮಳೆ ಸ್ವಲ್ಪ ಕಡಿಮೆಯಾಗಬಹುದು. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಮಳೆಯ ಸಾಧ್ಯತೆಗಳಿವೆ. 
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 2ರಿಂದ ಮಳೆ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕೊಪ್ಪಳ, ಬಳ್ಳಾರಿ, ರಾಯಚೂರು, ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಆಗಸ್ಟ್ 1ರಿಂದ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. 

ವಾಯುಭಾರ ಕುಸಿತವು ಗುಜರಾತ್ ತಲುಪಿದ್ದು, ಗುಜರಾತ್ ರಾಜ್ಯದ ದಕ್ಷಿಣ ಭಾಗಗಳಲ್ಲಿ ಭಾರಿ ಮಳೆ ಹಾಗೂ ಅನಾಹುತ ಸೃಷ್ಟಿಸುತ್ತಿದೆ.
ಈ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದಂತೆ ಮುಂಗಾರು ದುರ್ಬಲಗೊಳ್ಳಲಿದೆ. 
ಆಗಸ್ಟ್ 4ರ ಸುಮಾರಿಗೆ ಮಧ್ಯಮ ಸ್ತರದಲ್ಲಿ ಶ್ರೀಲಂಕಾ ಪೂರ್ವ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಪರಿಣಾಮ ಹಾಗೂ ಪರಿಸ್ಥಿತಿ ಕಾದು ನೋಡಬೇಕಾಗಿದೆ. 

30 July 2026

31.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

31.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಬಿಸಿಲು, ಮೋಡ ಹಾಗೂ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಕಳೆದ ಎರಡು ದಿನಗಳಿಂದ ಕರಾವಳಿ ತೀರ ಭಾಗಗಳಲ್ಲಿ ಮಳೆ ಕಡಿಮೆ ಇತ್ತು. ಆದರೆ ಇವತ್ತು ಮಧ್ಯಾಹ್ನ ನಂತರ ಅಥವಾ ಸಂಜೆಯಿಂದ ಮಳೆ ಸ್ವಲ್ಪ ಹೆಚ್ಚಾಗುವ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 2ರಿಂದ ಮಳೆ ಕಡಿಮೆಯಾಗಬಹುದು. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಮಲೆನಾಡಿನ ಈ ಮಳೆಯು ವಾಯುಭಾರ ಕುಸಿತ ಪರಿಣಾಮದಿಂದ ಉಂಟಾಗಿದೆ. ವಾಯುಭಾರ ಕುಸಿತವು ಶಿಥಿಲ ಅಥವಾ ರಾಜಸ್ಥಾನ ಕಡೆಗೆ ಸಾಗುತ್ತಿದ್ದಂತೆಯೇ ಮಳೆಯ ಪ್ರಮಾಣ ಕಡಿಮೆಯಾಗಬಹುದು.

ಉತ್ತರ ಒಳನಾಡು :ರಾಜ್ಯದ ಉತ್ತರ ಒಳನಾಡಿನ ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದರೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದಂತೆ ಮಳೆ ಕಡಿಮೆಯಾಗಬಹುದು. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ವಾಯುಭಾರ ಕುಸಿತದ ಪರಿಣಾಮ ಕಡಿಮೆ ಇರುವುದರಿಂದ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ವಾಯುಭಾರ ಕುಸಿತವು ಶಿಥಿಲಗೊಂಡ ನಂತರ ಆಗಸ್ಟ್ 3ರಿಂದ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. 

ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತವು ಇನ್ನೆರಡು ದಿನಗಳಲ್ಲಿ ಗುಜರಾತ್ ಅಥವಾ ರಾಜಸ್ಥಾನ ತಲುಪಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರೊಂದಿಗೆ ಮುಂಗಾರು ದುರ್ಬಲವಾಗುವ ಸಾಧ್ಯತೆಗಳಿವೆ. 

29 July 2026

30.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

30.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಸುಳ್ಯ ತಾಲ್ಲೂಕು ಸ್ವಲ್ಪ ಕಡಿಮೆ ಇರಬಹುದು.  
ಈಗಿನ ವಾಯುಭಾರ ಕುಸಿತವು ಆಗಸ್ಟ್ 1ರಂದು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರೊಂದಿಗೆ ಆಗಸ್ಟ್ 2ರಿಂದ ಮುಂಗಾರು ಸಹ ದುರ್ಬಲಗೊಳ್ಳಲಿದೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರಬಹುದು. ಶಿವಮೊಗ್ಗ ಜಿಲ್ಲೆಯಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಆಗಸ್ಟ್ 2ರಿಂದ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ‌ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್ 3ರಿಂದ ಅಲ್ಲಲ್ಲಿ ಮಳೆಯಾಗುವ ಲಕ್ಷಣಗಳಿವೆ. 

ಈಗಿನ ವಾಯುಭಾರ ಕುಸಿತವು ಉತ್ತರ ಆಂದ್ರಾ ತೆಲಂಗಾಣ, ಛತ್ತೀಸಗಡ ಮಧ್ಯಪ್ರದೇಶ ರಾಜ್ಯಗಳ ಮೂಲಕ ಸಾಗಿ ಜುಲೈ 31 ಅಥವಾ ಆಗಸ್ಟ್ 1ರಂದು ಗುಜರಾತ್ ತಲಪುವ ನಿರೀಕ್ಷೆಯಿದೆ. 
ಇದರೊಂದಿಗೆ ಶ್ರೀಲಂಕಾ ದಕ್ಷಿಣ ನೇರಕ್ಕೆ ಭೂಮಧ್ಯ ರೇಖೆಗಿಂತ ಕೆಳಗೆ ಹಿಂದೂ ಮಹಾಸಾಗರದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಇದರಿಂದ ಮುಂಗಾರು ಮತ್ತಷ್ಟು ದುರ್ಬಲಗೊಳ್ಳುವ ಸಾಧ್ಯತೆಗಳಿವೆ. 




28 July 2026

29.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

29.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ :  ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಅಲ್ಲಲ್ಲಿ ಸಣ್ಣ ಪ್ರಮಾಣದ ಗುಡುಗು ಸಾಧ್ಯತೆಯೂ ಇದೆ. 
ಈಗಿನಂತೆ ಮುಂದಿನ 10 ದಿನಗಳವರೆಗೂ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ ಸಾಧ್ಯತೆಗಳಿವೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಹಾಗೂ ಉಳಿದ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ ಸ್ವಲ್ಪ ಹೆಚ್ಚಿರಬಹುದು. 
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 3 ರ ತನಕ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 
ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯಬಹುದು. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇವತ್ತು ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್ 2ರಿಂದ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ. 

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ವಾಯುಭಾರ ಕುಸಿತದ ಪರಿಣಾಮದಿಂದ ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. ಈಗಿನಂತೆ ಈ ವಾಯುಭಾರ ಕುಸಿತವು ಜಾರ್ಖಂಡ್, ಮಧ್ಯಪ್ರದೇಶ ಮೂಲಕ ಸಾಗಿ ಸುಮಾರು ಜುಲೈ 31ರಂದು ಗುಜರಾತ್ ತಲಪುವ ನಿರೀಕ್ಷೆಯಿದೆ. 
ಮುಂದೆ ಯಾವುದೇ ತಿರುವಿಕೆ ಇಲ್ಲೆ ಹೋದರೆ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆಗಳಿವೆ. 


27 July 2026

28.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

28.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಬಿಡುವಿನ ಅವಧಿ ಸ್ವಲ್ಪ ಹೆಚ್ಚಿರಬಹುದು. 
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ದಿನದ ಒಟ್ಟು ಮಳೆ ಸಾಮಾನ್ಯ 20.0ರಿಂದ 30.00mm ಗಳಷ್ಟಿರಬಹುದು. ಭಾರಿ ಮಳೆಯ ಸಾಧ್ಯತೆಗಳು ಕಡಿಮೆಯಾಗಿದೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸ್ವಲ್ಪ ಹೆಚ್ಚಿರಬಹುದು. 
ಮುಂದಿನ 10 ದಿನಗಳವರೆಗೂ ಸಾಮಾನ್ಯ ಮಳೆ ಮುಂದುವರಿಯಬಹುದು. ಆದರೆ ದಿನ ಕಳೆದಂತೆ ಮಳೆಯ ಪ್ರಮಾಣ ಕ್ರಮೇಣ ಕಡಿಮೆಯಾಗಬಹುದು. ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಪ್ರಭಲಗೊಂಡಲ್ಲಿ ಮಳೆ ಹೆಚ್ಚಾಗಬಹುದು. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರದಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬೆಂಗಳೂರು, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದೆರಡು ಕಡೆ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜುಲೈ 28ರಿಂದ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಆಗಸ್ಟ್ 2ರಿಂದ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ. 

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳದ ವಾಯುಭಾರ ಕುಸಿತವು ಜಾರ್ಖಂಡ್, ಮಧ್ಯಪ್ರದೇಶ ರಾಜ್ಯಗಳ ಮೂಲಕ ಸಾಗಿ ಬರುವ ಸಾಧ್ಯತೆಗಳಿದ್ದು, ಪರಿಸ್ಥಿತಿ ಕಾದು ನೋಡಬೇಕಾಗಿದೆ. ಮುಂಗಾರು ದುರ್ಬಲತೆ ಮುಂದುವರಿಯಲಿದೆ ಹಾಗೂ ವಾಯುಭಾರ ಕುಸಿತದ ಪ್ರಭಾವದಿಂದ ಮುಂಗಾರು ಈಗ ಅಲ್ಪ ಚೇತರಿಸಿಕೊಂಡಿದೆ. 

26 July 2026

27.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

27.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬೆಳಿಗ್ಗೆ ಅಲ್ಲಲ್ಲಿ ಸಾಮಾನ್ಯ ಹಾಗೂ ಮಧ್ಯಾಹ್ನ ನಂತರ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ. 
ಮತ್ತೆ ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮದಿಂದ ಮುಂದಿನ 10 ದಿನಗಳವರೆಗೂ ಮುಂಗಾರು ಚುರುಕಾಗಿರುವ ಲಕ್ಷಣಗಳಿವೆ. ಸಿಕ್ಕ ಅವಕಾಶದಲ್ಲಿ ತೋಟಗಳಿಗೆ ಔಷಧಿ ಸಿಂಪಡಿಸುವುದು ಉತ್ತಮ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರಬಹುದು.
ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ಮುಂದಿನ 10 ದಿನಗಳವರೆಗೂ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ ಬಾಗಲಕೋಟೆ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ತುಮಕೂರು, ಬೆಂಗಳೂರು ಉತ್ತರ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜೋರು ಮಳೆಯ ಸಾಧ್ಯತೆಗಳು ಕಡಿಮೆಯಾಗಿದ್ದು, ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ಒಂದೆರಡು ಕಡೆ ಸಾಮಾನ್ಯ ಮಳೆ ಮುಂದುವರಿಯಬಹುದು.

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ಜುಲೈ 27ರಂದು ಪಶ್ಚಿಮ ಬಂಗಾಳ, ಜಾರ್ಖಂಡ್, ಉತ್ತರ ಪ್ರದೇಶ, ಮಧ್ಯಪ್ರದೇಶ ರಾಜ್ಯಗಳ ಮೂಲಕ ಸಾಗಿ ಬರುವ ಸಾಧ್ಯತೆಗಳಿವೆ.
ಎಲ್ ನಿನೋ ಪರಿಣಾಮದಿಂದ ಮುಂಗಾರು ದುರ್ಬಲವಾಗಿದ್ದರೂ ವಾಯುಭಾರ ಕುಸಿತಗಳು ಮಳೆ ತರುತ್ತಿವೆ. 

25 July 2026

26.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಬೆಳಿಗ್ಗೆಯಿಂದ ಒಂದೆರಡು ಮತ್ತು ಮಧ್ಯಾಹ್ನ ನಂತರ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಅಲ್ಲಿ ಗುಡುಗು ಸಹ ಇರಬಹುದು. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಜುಲೈ 26ರಂದು ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ಮತ್ತೊಂದು ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿರುವುದರಿಂದ ಮುಂದಿನ ಎರಡು, ಮೂರು ದಿನಗಳ ನಂತರ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ. ಆದರೆ ಕಾದು ನೋಡಬೇಕಾಗಿದೆ.

ಮಲೆನಾಡು : ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರಬಹುದು. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜುಲೈ 26ರಂದು ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ಉಂಟಾಗಲಿರುವ ತಿರುವಿಕೆಯ ಪರಿಣಾಮ ಕಾದು ನೋಡಬೇಕಾಗಿದೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದು, ತಿರುಗುವಿಕೆಯು ಪರಿಣಾಮ ನೋಡಬೇಕಾಗಿದೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜೋರು ಮಳೆಯ ಸಾಧ್ಯತೆಗಳು ಕಡಿಮೆಯಾಗಿದೆ. ಅಲ್ಲಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಮತ್ತೊಂದು ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿದ್ದು, ಪರಿಣಾಮ ಕಾದು ನೋಡಬೇಕಾಗಿದೆ. 

24 July 2026

25.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


25.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಜಿಲ್ಲೆಯಲ್ಲಿ ಬಿಸಿಲು, ಮೋಡ ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡ ಹಾಗೂ ಮಧ್ಯಾಹ್ನ, ಸಂಜೆ, ರಾತ್ರಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬೆಳಿಗ್ಗೆಯಿಂದಲೆ ಮೋಡ ಹಾಗೂ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ.
ಗಾಳಿಯ ಚಲನೆಯು ವಾಯವ್ಯದಿಂದ  ಆಗ್ನೇಯಕ್ಕೆ ಇರುವುದರಿಂದ ಸುಳ್ಯ, ಮಡಿಕೇರಿ ಘಾಟಿಯ ಹಾಗೂ ಘಾಟಿಯ ಕೆಳಗಿನ ಪ್ರದೇಶಗಳಲ್ಲಿ ಮಳೆ ಹೆಚ್ಚಿರಬಹುದು.
ಈಗಿನಂತೆ ಗುಜರಾತ್ ತಿರುಗುವಿಕೆಯು ಶಿಥಿಲಗೊಳ್ಳುತ್ತಿದ್ದಂತೆಯೇ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಆಗಸ್ಟ್ ಆರಂಭದಲ್ಲಿ ಮಳೆಯ ಪ್ರಮಾಣ ತುಂಬಾ ಕಡಿಮೆಯಾಗುವ ಸೂಚನೆಗಳಿವೆ. 

ಮಲೆನಾಡು : ಕೊಡಗು ಮಧ್ಯಾಹ್ನ ನಂತರ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಆದರೆ ಗಾಳಿಯ ದಿಕ್ಕು ವಾಯವ್ಯದಿಂದ ಆಗ್ನೇಯಕ್ಕೆ ಇರುವುದರಿಂದ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ ಹೆಚ್ಚಿರಬಹುದು. ಹಾಸನ ಜಿಲ್ಲೆಯಲ್ಲಿ ಮೋಡ ಅಥವಾ ತುಂತುರು ಇದ್ದರೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಧ್ಯಾಹ್ನ ನಂತರ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸಹ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಗುಜರಾತ್ ತಿರುಗುವಿಕೆಯು ಶಿಥಿಲಗೊಳ್ಳುತ್ತಿದ್ದಂತೆಯೇ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬೀದರ್, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಜುಲೈ 27ರಿಂದ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಜುಲೈ 26ರಿಂದ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸೂಚನೆಗಳಿವೆ.

ವಾಯುಭಾರ ಕುಸಿತದಂತ ತಿರುವಿಕೆಯು ಗುಜರಾತ್ ರಾಜ್ಯದಲ್ಲಿದ್ದು ಕಳೆದ ಮೂರು ದಿನಗಳಿಂದ ಗುಜರಾತಿನ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. 
ಈ ತಿರುಗುವಿಕೆಯು ಶಿಥಿಲಗೊಳ್ಳುತ್ತಿದ್ದಂತೆಯೇ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆಗಳಿವೆ. 

28.08.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

28.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ...