Advertise

01 July 2026

02.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

02.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ನಿನ್ನೆ ಉತ್ತಮ ಮಳೆಯಾಗಿದ್ದು, ಇವತ್ತು ಸಹ ಬಿಟ್ಟು ಬಿಟ್ಟು ಉತ್ತಮ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 2 ಹಾಗೂ 3ರಂದು ಮಳೆಯ ತೀವ್ರತೆ ಸ್ವಲ್ಪ ಕಡಿಮೆಯಾಗುವ ಸೂಚನೆಗಳಿದ್ದು, 4 ರಿಂದ 10ರ ತನಕ ಉತ್ತಮ ಮಳೆಯ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ಬಿಟ್ಟು ಬಿಟ್ಟು ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರಬಹುದು.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಜುಲೈ 2 ರಿಂದ ಮಳೆ ಕಡಿಮೆಯಾಗುವ ಸೂಚನೆಗಳಿದ್ದು, 4ರಿಂದ ಮತ್ತೆ ಹೆಚ್ಚಳವಾಗುವ ಲಕ್ಷಣಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕಲಬುರ್ಗಿ ಜಿಲ್ಲೆಯಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ. 
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜುಲೈ 2ರಿಂದ ಮಳೆ ಕಡಿಮೆಯಾಗುವ ಸೂಚನೆಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ದಾವಣಗೆರೆ, ವಿಜಯನಗರ, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ವಾತಾವರಣ ಮುಂದುವರಿಯಲಿದ್ದು, ಜೋರು ಮಳೆಯ ಸಾಧ್ಯತೆಗಳು ಗೋಚರಿಸುತ್ತಿಲ್ಲ. 

ಮುಂಗಾರು, ಸೋಮಾಲಿಯನ್ ಜಟ್ ವೇವ್ಸ್ ಪ್ರಭಾವದಿಂದ ಸ್ವಲ್ಪ ಚುರುಕಾಗಿದ್ದು ಜುಲೈ 10 ತನಕ ಸಾಮಾನ್ಯ ಮುಂಗಾರು ಮುಂದುವರಿಯಬಹುದು. ನಂತರ ದುರ್ಬಲಗೊಳ್ಳುವ ಲಕ್ಷಣಗಳಿವೆ. 

No comments:

Post a Comment

12.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

12.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಮಧ್ಯಮ ಸ್ತರದಲ್ಲಿ ಗಾಳಿಯ...