ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜುಲೈ 11ರ ತನಕ ಈ ಮಳೆ ಮುಂದುವರಿಯುವ ಲಕ್ಷಣಗಳಿವೆ. ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು 12ರಿಂದ ಅವಕಾಶ ಸಿಗಬಹುದು.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮಲೆನಾಡು ಜಿಲ್ಲೆಗಳಲ್ಲಿ ಜುಲೈ 10ರ ತನಕ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ನಂತರ ಕಡಿಮೆಯಾಗಬಹುದು.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಬಳ್ಳಾರಿ, ರಾಯಚೂರು, ಕೊಪ್ಪಳ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಜೋರು ಮಳೆಯ ಸಾಧ್ಯತೆಗಳು ಕಡಿಮೆಯಾಗಿದ್ದು, 3 ರಿಂದ 4 ದಿನಗಳ ತನಕ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ಜುಲೈ 6ರ ತನಕ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆ ಮುಂದುವರಿಯುವ ಸಾಧ್ಯತೆಗಳಿದ್ದು, ನಂತರ ಬಿಸಿಲು ಹಾಗೂ ಮೋಡದ ವಾತಾವರಣದ ಲಕ್ಷಣಗಳಿವೆ.
ಬಂಗಾಳಕೊಲ್ಲಿಯಲ್ಲಿ ಮಧ್ಯಮ ಸ್ತರದ ಗಾಳಿಯ ತಿರುಗುವಿಕೆಯು ಪಶ್ಚಿಮ ಬಂಗಾಳ ಕರಾವಳಿಯಲ್ಲಿದ್ದು, ಇನ್ನೆರಡು ದಿನಗಳಲ್ಲಿ ಮಧ್ಯಮದೇಶ ದಾಟಿ ರಾಜಸ್ಥಾನ ತಲುಪುವ ನಿರೀಕ್ಷೆ ಇದೆ. ಇದೆ ಸಮಯದಲ್ಲಿ ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ಇನ್ನೊಂದು ತಿರುಗುವಿಕೆಯು ಉಂಟಾಗಲಿದ್ದು, ಇದರ ಪ್ರಭಾವದಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 5ರಿಂದ ಮಳೆ ಸ್ವಲ್ಪ ಹೆಚ್ಚಾಗುವ ಸಾಧ್ಯತೆಗಳಿವೆ.
No comments:
Post a Comment