ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಉಡುಪಿ ಸುತ್ತಮುತ್ತ ಕರಾವಳಿಯಲ್ಲಿ ಸ್ವಲ್ಪ ಹೆಚ್ಚಿರಬಹುದು.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 10ರ ತನಕ ಈ ಮಳೆ ಮುಂದುವರಿಯುವ ಸೂಚನೆಗಳಿವೆ. ನಂತರ ಕಡಿಮೆಯಾಗುವ ಲಕ್ಷಣಗಳಿವೆ. 11ರಿಂದ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರಬಹುದು. ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಜುಲೈ 10ರ ತನಕ ಈ ಮಳೆ ಮುಂದುವರಿಯುವ ಲಕ್ಷಣಗಳಿವೆ. 11ರಿಂದ ಕಾಪಿ ತೋಟಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ, ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜುಲೈ 6ರ ತನಕ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ನಂತರ ಕಡಿಮೆಯಾಗಬಹುದು.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದ್ದರೆ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆಗಳು ಕ್ಷೀಣಿಸುತ್ತಿದ್ದು, ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಮಧ್ಯಮ ಸ್ತರದಲ್ಲಿ ಉಂಟಾಗುವ ತಿರುವಿಕೆ ಕಾರಣದಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಗಳಿವೆ.
No comments:
Post a Comment