ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಆದರೆ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡ, ಬಿಸಿಲು ಹಾಗೂ ಬಿಟ್ಟು ಬಿಟ್ಟು ಮಳೆಯ ಸಾಧ್ಯತೆಗಳಿವೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರಬಹುದು.
ಈಗಿನ ಮುನ್ಸೂಚನೆಯಂತೆ ಜುಲೈ 10ರ ನಂತರ ಮಳೆ ತೀವ್ರ ಇಳಿಕೆಯಾಗುವ ಸಾಧ್ಯತೆಗಳಿವೆ.
ಮಲೆನಾಡು : ರಾಜ್ಯದ ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೂ ಅಲ್ಲಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಜೋತೆಗೆ ಮಧ್ಯಾಹ್ನ ನಂತರ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ಜುಲೈ 9ರ ತನಕ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ನಂತರ ಕಡಿಮೆಯಾಗಬಹುದು.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೂ, ಎಲ್ಲಾ ಕಡೆ ಮಳೆಯ ಸಾಧ್ಯತೆಗಳಿಲ್ಲ. ಮುನ್ಸೂಚನೆಯಲ್ಲಿದ್ದಷ್ಟು ಮಳೆಯಾಗುತ್ತಿಲ್ಲ.
ಈಗಿನ ಮುನ್ಸೂಚನೆಯಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜುಲೈ 5ರಿಂದ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ದಾವಣಗೆರೆ, ವಿಜಯನಗರ, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಆದರೆ ಮುನ್ಸೂಚನೆಯಲ್ಲಿದ್ದಷ್ಟು ಮಳೆಯಾಗುತ್ತಿಲ್ಲ.
ಉಳಿದ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನ ಮುನ್ಸೂಚನೆಯಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜುಲೈ 5 ಅಥವಾ 6 ರಿಂದ ಅಲ್ಲಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿವೆ.
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುತದ್ದಂತೆಯೇ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ.
No comments:
Post a Comment