Advertise

05 July 2026

06.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

06.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಗಾಳಿ ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಜುಲೈ 9ರಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಬಿಟ್ಟು ಬಿಟ್ಟು ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಜುಲೈ 8ರ ತನಕ ಸಾಮಾನ್ಯ ಮಳೆಯ ಸಾಧ್ಯತೆಗಳಿದ್ದು, ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ಹಾಗೂ ತುಂತುರು ಮಳೆಯ ಮುನ್ಸೂಚನೆ ಇದೆ. ಬಾಗಲಕೋಟೆ, ವಿಜಯಪುರ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ತುಂತುರು ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಗೋಚರಿಸುತ್ತಿಲ್ಲ.

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದ ಪ್ರಭಾವದಿಂದ ಮಹಾರಾಷ್ಟ್ರ ಹಾಗೂ ಗುಜರಾತ್ ಕರಾವಳಿಯಲ್ಲಿ ಭಾರಿ ಮಳೆಯ ಮುನ್ಸೂಚನೆಗಳಿದ್ದು, ಮುಂದಿನ 2 ದಿವಸಗಳ ಕಾಲ ಈ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಜುಲೈ 8ರಿಂದ ಈ ಮಹಾಮಳೆಯು ಕಡಿಮೆಯಾಗುವುದರೊಂದಿಗೆ ಕರ್ನಾಟಕ ರಾಜ್ಯದಲ್ಲೂ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಲಕ್ಷಣಗಳಿವೆ. ವಾತಾವರಣದ ತಾಪಮಾನವೂ ಗಣನೀಯವಾಗಿ ಏರಿಕೆಯಾಗಬಹುದು. 
ಜುಲೈ 10ರಿಂದ ಎಲ್ ನಿನೋ ಪ್ರಭಾವದ ಲಕ್ಷಣಗಳು ಇರಬಹುದು, ದೇಶದಾದ್ಯಂತ ಮುಂಗಾರು ತೀವ್ರ ದುರ್ಬಲಗೊಳ್ಳುವಂತೆ ಕಾಣುತ್ತಿದೆ. 

No comments:

Post a Comment

12.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

12.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಮಧ್ಯಮ ಸ್ತರದಲ್ಲಿ ಗಾಳಿಯ...