Advertise

08 July 2026

09.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

09.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡ, ಸಣ್ಣ ಪ್ರಮಾಣದ ಬಿಸಿಲು ಹಾಗೂ ಬಿಟ್ಟು ಬಿಟ್ಟು ಗಾಳಿಯೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಮಾಣ ಸ್ವಲ್ಪ ಮಟ್ಟಿಗೆ ಕಡಿಮೆ ಇರಬಹುದು. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಿರುವ ಸಾಧ್ಯತೆಗಳಿವೆ.

ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಜುಲೈ 11ರಿಂದ 16ರ ತನಕ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಜುಲೈ 10ರಿಂದ ಮಳೆ ಕಡಿಮೆಯಾಗಲಿದ್ದು, ತೋಟಗಾರಿಕಾ ಬೆಳೆಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಲಿದೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಬಾಗಲಕೋಟೆ, ವಿಜಯಪುರ, ಕಲಬುರ್ಗಿ ಜಿಲ್ಲೆಗಳ ಮಹಾರಾಷ್ಟ್ರ ಗಡಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜುಲೈ 10ರಿಂದ ಮಳೆ ಕಡಿಮೆಯಾಗಲಿದ್ದು ಬಿಸಿಲಿನ ವಾತಾವರಣ ಇರಬಹುದು. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜುಲೈ 10ರಿಂದ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿವೆ. 

ಮಹಾರಾಷ್ಟ್ರದ ಮುಂಬೈ ಕರಾವಳಿಯ ತಿರುಗುವಿಕೆಯು ಜುಲೈ 9 ರಂದು ಶಿಥಿಲಗೊಳ್ಳುತ್ತಿದ್ದಂತೆಯೇ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ.
ಈಗಿನಂತೆ ಜುಲೈ 17ರಿಂದ ರಾಜ್ಯದ ಕರಾವಳಿ ತೀರ ಭಾಗಗಳಲ್ಲಿ ಮತ್ತೆ ಮುಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದರೂ ಪರಿಸ್ಥಿತಿ ಕಾದು ನೋಡಬೇಕಾಗಿದೆ. 

No comments:

Post a Comment

12.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

12.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಮಧ್ಯಮ ಸ್ತರದಲ್ಲಿ ಗಾಳಿಯ...