Advertise

09 July 2026

10.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


10.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಬಿಟ್ಟು ಬಿಟ್ಟು ದಿನದಲ್ಲಿ 2, 3 ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬಿಡುವಿನ ಸಮಯ ಸ್ವಲ್ಪ ಹೆಚ್ಚಿರಬಹುದು. ಕರಾವಳಿ ತೀರ ಭಾಗಗಳಲ್ಲಿ ಮಳೆ ಕಡಿಮೆ ಇದ್ದು, ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರಬಹುದು. ಮಹಾರಾಷ್ಟ್ರ ಕರಾವಳಿಯ ತಿರುಗುವಿಕೆಯು ಶಿಥಿಲಗೊಂಡಿದ್ದರಿಂದ ಗಾಳಿಯ ಸಾಧ್ಯತೆ ಕಡಿಮೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 11ರಿಂದ ಮಳೆಯ ಪ್ರಮಾಣ ತೀವ್ರವಾಗಿ ಕಡಿಮೆಯಾಗಲಿದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಹಾಗೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ 2, 3 ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಜುಲೈ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, 11ರಿಂದ ಬಿಸಿಲಿನ ಅವಧಿ ಹೆಚ್ಚಿರಬಹುದು. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದ್ದು, ಧಾರವಾಡ, ಹಾವೇರಿ, ಗದಗ, ರಾಯಚೂರು ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜುಲೈ 11ರಿಂದ ಬಿಸಿಲಿನ ಅವಧಿ ಹೆಚ್ಚಿರಬಹುದು.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮಂಡ್ಯ, ರಾಮನಗರ ಹಾಗೂ ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜುಲೈ 11ರಿಂದ ಬಿಸಿಲಿನ ಅವಧಿ ಹೆಚ್ಚಿರಬಹುದು. 

ಅರಬ್ಬಿ ಸಮುದ್ರದ ಮಹಾರಾಷ್ಟ್ರ ಕರಾವಳಿಯಲ್ಲಿ ಉಂಟಾಗಿದ್ದ ತಿರುವಿಕೆಯು ಶಿಥಿಲಗೊಂಡ ಪರಿಣಾಮ ರಾಜ್ಯದಲ್ಲೂ ಗಾಳಿಯ ತೀವ್ರತೆ ಕಡಿಮೆಯಾಗಿದೆ. ಜೊತೆಗೆ ಮಳೆಯ ಪ್ರಮಾಣ ತೀವ್ರವಾಗಿ ಕಡಿಮೆಯಾಗಲಿದೆ. 
ಮುಂದಿನ ದಿನಗಳಲ್ಲಿ ತಿರುವಿಕೆ ಅಥವಾ ವಾಯುಭಾರ ಕುಸಿತದಂತಹ ವಿದ್ಯಮಾನಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ ಚುರುಕಾಗಬಹುದು. ಇಲ್ಲಾಂದ್ರೆ ಎಲ್ ನಿನೋ ಪ್ರಭಾವ ಹೆಚ್ಚಾಗಬಹುದು. 

No comments:

Post a Comment

12.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

12.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಮಧ್ಯಮ ಸ್ತರದಲ್ಲಿ ಗಾಳಿಯ...