ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಕಡಿಮೆ ಇರಬಹುದು. ಉತ್ತರ ಕನ್ನಡ ಜಿಲ್ಲೆಯಲ್ಲಿ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 11ರಂದು ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕಾಸರಗೋಡು, ದಕ್ಷಿಣ ಜಿಲ್ಲೆಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. 12ರಿಂದ ಮೋಡ ಹಾಗೂ ಬಿಸಿಲಿನ ವಾತಾವರಣದ ಲಕ್ಷಣಗಳಿವೆ. ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ 11ರಿಂದ ಬಿಸಿಲು ಹಾಗೂ ಮೋಡದ ವಾತಾವರಣ ಇರಬಹುದು.
ಮಲೆನಾಡು : ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಜುಲೈ 11ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಳ್ಳಾರಿ ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು,
ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಕಡಿಮೆಯಾಗಿದೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಮೋಡ ಹಾಗೂ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜುಲೈ 11ರಿಂದ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಕಡಿಮೆಯಾಗಿದೆ.
No comments:
Post a Comment