ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಜೊತೆಗೆ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಜೋರು ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ.
ಜುಲೈ 17ರಿಂದ ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ಹಾಗೂ 19 ಅಥವಾ 20ರಿಂದ ಉಳಿದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ ಆರಂಭವಾಗುವ ಲಕ್ಷಣಗಳಿವೆ.
ರಾಜ್ಯದ ಮಲೆನಾಡು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ದಿನದ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದೊಂದಿಗೆ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡ ಇರುವ ಮುನ್ಸೂಚನೆ ಇದೆ. ಈಗಿನಂತೆ ಈ ಮೂರು ಪ್ರದೇಶಗಳ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಕಾಣಿಸುತ್ತಿಲ್ಲ.
ಸುಪರ್ ಎಲ್ ನಿನೋ ಪರಿಣಾಮದಿಂದ ಮುಂಗಾರು ಮಾರತಗಳು ಇದ್ದರೂ ತೇವಾಂಶ ಭರಿತ ಮೋಡಗಳನ್ನು ಹೊತ್ತು ತರಲು ವಿಫಲವಾಗಿದೆ.
ಈಗಿನಂತೆ ಯಾವುದೇ ವಾಯುಭಾರ ಕುಸಿತಗಳ ಲಕ್ಷಣಗಳಿಲ್ಲದ್ದರಿಂದ ಮುಂದಿನ 10 ದಿನಗಳವರೆಗೂ ರಾಜ್ಯದಲ್ಲಿ ಹಾಗೂ ಭಾರತ ದೇಶದಲ್ಲೇ ಮಳೆಯ ಸಾಧ್ಯತೆಗಳು ಕಡಿಮೆಯಾಗಿದೆ.
No comments:
Post a Comment