Advertise

15 July 2026

16.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

16.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : 

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಸಾಧ್ಯತೆಗಳಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು, ಮೋಡ ಹಾಗೂ ಕರಾವಳಿ ತೀರ ಭಾಗಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಜುಲೈ 16ರಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಆರಂಭವಾಗುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಜುಲೈ 16ರಿಂದ ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆ ಆರಂಭವಾಗುವ ಸಾಧ್ಯತೆಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ವಿಜಯಪುರ ಜಿಲ್ಲೆಯ ಇಂಡಿ ಹಾಗೂ ಮಹಾರಾಷ್ಟ್ರದ ಸೋಲಾಪುರ ಸುತ್ತಮುತ್ತ ಪ್ರದೇಶಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಕಾಣಿಸುತ್ತಿಲ್ಲ. ಅನಿರೀಕ್ಷಿತವಾಗಿ ಒಂದೆರಡು ಕಡೆ ಸಾಮಾನ್ಯ ಮಳೆಯಾಗಬಹುದು. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜುಲೈ 18 ಹಾಗೂ 19ರಂದು ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. 

ಎಲ್ನಿನೋ ಪ್ರಭಾವದಿಂದ ರಾಜ್ಯದಲ್ಲಿ ಮಳೆ ಕಡಿಮೆಯಾಗಿದೆ. ಮಧ್ಯಮ ಸ್ತರದಲ್ಲಿ ಭೂಮಿಯ ಉತ್ತರ ಭಾಗದಿಂದ ಭಾರರತದ ಕಡೆಗೆ ಬೀಸುತ್ತಿರುವ ಶುಷ್ಕ ಗಾಳಿಯ ಪರಿಣಾಮದಿಂದ ರಾಜ್ಯದಲ್ಲೂ ಹಗಲಿನ ತಾಪಮಾನ ಏರಿಕೆಯಾಗುವ ಸಾಧ್ಯತೆಗಳು ಹೆಚ್ಚಾಗುತ್ತಿದೆ. 
ಮುಂದಿನ ದಿನಗಳಲ್ಲಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗಬಹುದು. 





No comments:

Post a Comment

27.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

27.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂ...