Advertise

16 July 2026

17.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಕಡಿಮೆಯಾಗಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಮತ್ತು ಅದರ ಘಟ್ಟದ ಕೆಳಗಿನ ಒಂದೆರಡು ಪ್ರದೇಶಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಈಗಿನ ಈ ವಾತಾವರಣವು ಮುಂದಿನ 10 ದಿನಗಳವರೆಗೂ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ 
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ  ಜೋರು ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಈಗಿನ ಇದೇ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಗದಗ, ವಿಜಯಪುರ, ರಾಯಚೂರು, ಬಳ್ಳಾರಿ, ರಾಯಚೂರು ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ. ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಕೆಲವು ಭಾಗಗಳಲ್ಲಿ ಅನಿರೀಕ್ಷಿತವಾಗಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಈ ಸಾಮಾನ್ಯ ಮಳೆಯು ಮುಂದುವರಿಯುವ ಸಾಧ್ಯತೆಗಳಿವೆ. ಜೋರು ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಯ ದಕ್ಷಿಣ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜೋರು ಮಳೆಯ ಸಾಧ್ಯತೆಗಳು ಕಡಿಮೆಯಾಗಿದ್ದು ಅಲ್ಲಲ್ಲಿ ಸಾಮಾನ್ಯ ಮಳೆಯು ಮುಂದುವರಿಯುವ ಸೂಚನೆಗಳಿವೆ.

ಅರಬ್ಬಿ ಸಮುದ್ರದಲ್ಲಿ ಅಥವಾ ಬಂಗಾಳಕೊಲ್ಲಿಯಲ್ಲಿ ಮುಂದಿನ 10 ದಿನಗಳವರೆಗೂ ಯಾವುದೇ ಮಹತ್ವದ ವಿದ್ಯಮಾನಗಳು ಇಲ್ಲದ ಕಾರಣ ರಾಜ್ಯದಲ್ಲಿ ಅಲ್ಲಲ್ಲಿ ತುಂತುರು ಹಾಗೂ ಕೆಲವು ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. 

No comments:

Post a Comment

26.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ...