Advertise

17 July 2026

18.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

 18.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 25ರ ತನಕವೂ ಈಗಿನ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. ನಿನ್ನೆ ಕರಾವಳಿಯ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜುಲೈ 18ರಂದು ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಒಟ್ಟಲ್ಲಿ ಮಳೆ ಕಡಿಮೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಗದಗ, ಬಳ್ಳಾರಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯು ಮುಂದುವರಿಯುವ ಸೂಚನೆಗಳಿವೆ. ಜೋರು ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಬೆಂಗಳೂರು ಉತ್ತರ, ತುಮಕೂರು, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜುಲೈ 18ರಂದು ಹೆಚ್ಚಿನ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ನಂತರ ಕಡಿಮೆಯಾಗಬಹುದು. 

ರಾಜ್ಯದಾದ್ಯಂತ ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಜೋರು ಮಳೆಯ ಸಾಧ್ಯತೆಗಳು ಕಡಿಮೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲೂ ನಿರಂತರ ಜೋರು ಮಳೆ ಕಾಣಿಸುತ್ತಿಲ್ಲ.
ಅರಬ್ಬಿ ಸಮುದ್ರ ಅಥವಾ ಬಂಗಾಳಕೊಲ್ಲಿಯಲ್ಲಿ ಹೆಚ್ಚಿನ ಯಾವುದೇ ಚಟುವಟಿಕೆಗಳು ಸಧ್ಯಕ್ಕೆ ಕಾಣಿಸುತ್ತಿಲ್ಲ. 

No comments:

Post a Comment

26.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ...