ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬೆಳಿಗ್ಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಮಧ್ಯಾಹ್ನ ನಂತರ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಜಾನೆಯಿಂದಲೇ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ.
ನಿನ್ನೆ ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಅಲ್ಲಲ್ಲಿ ಉತ್ತಮ ಮಳೆಯಾಗಿತ್ತು.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಮುನ್ಸೂಚನೆ ಇದೆ.
ಮಲೆನಾಡು : ರಾಜ್ಯದ ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರಬಹುದು.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಇದೇ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್ ಯಾದಗಿರಿ, ರಾಯಚೂರು, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜುಲೈ 19ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಸುಪರ್ ಎಲ್ ನಿನೋ ಪರಿಣಾಮದಿಂದ ಮುಂಗಾರು ಮಾರತಗಳ ದುರ್ಬಲತೆ ಮುಂದುವರಿಯಲಿದ್ದು, ಪಶ್ಚಿಮ ಬಂಗಾಳದ ವಾಯುಭಾರ ಕುಸಿತದಂತ ತಿರುವಿಕೆಯ ಕಾರಣದಿಂದ ರಾಜ್ಯದಲ್ಲಿ ಅಲ್ಪ ಸ್ವಲ್ಪ ಮಳೆಯಾಗುತ್ತಿದೆ.
No comments:
Post a Comment