ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 20ರಿಂದ ಮಳೆ ಕಡಿಮೆಯಾಗುವ ಸೂಚನೆಗಳಿವೆ. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಇತರ ಕರಾವಳಿ ಜಿಲ್ಲೆಗಳಿಗಿಂತ ಸ್ವಲ್ಪ ಹೆಚ್ಚಿರಬಹುದು.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರಬಹುದು.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಜುಲೈ 20ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ, ರಾಯಚೂರು, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಜಿಲ್ಲೆಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜುಲೈ 20ರಿಂದ 23ರ ತನಕ ಮಳೆಯ ಸಾಧ್ಯತೆಗಳು ಕಾಣಿಸುತ್ತಿಲ್ಲ. 24ರಿಂದ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ!
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ ಹಾಗೂ ಕೋಲಾರ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಜಿಲ್ಲೆಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜುಲೈ 22ರ ತನಕ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.
No comments:
Post a Comment