Advertise

20 July 2026

21.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


21.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸ್ವಲ್ಪ ಕಡಿಮೆ ಇರಬಹುದು.
ನಿನ್ನೆಯ ಮುನ್ಸೂಚನೆ ಸ್ಥಿತಿ ಬದಲಾವಣೆ ಹೊಂದಿ ರಾಜ್ಯದ ಕರಾವಳಿಯ ದಕ್ಷಿಣ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಈಗಿನಂತೆ 21ರಿಂದ ಮಳೆ ಪ್ರಮಾಣ ಸ್ವಲ್ಪ ಮಟ್ಟಿಗೆ ಕಡಿಮೆ ಅಂತಿದ್ದರೂ ಪರಿಸ್ಥಿತಿ ಕಾದು ನೋಡಬೇಕಾಗಿದೆ. ಮಳೆ ಕಡಿಮೆಯಾದರೂ ಸಾಮಾನ್ಯ ಮಳೆಯು ಜುಲೈ 29ರ ತನಕವೂ ಮುಂದುವರಿಯುವ ಸಾಧ್ಯತೆಗಳಿವೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ 21ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಆದರೂ ನಾಳೆಯ ಪರಿಸ್ಥಿತಿ ಕಾದುನೋಡಬೇಕಾಗಿದೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜುಲೈ 24ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಒರಿಸ್ಸಾ, ಛತ್ತೀಸಗಡ, ಜಾರ್ಖಂಡ್ ರಾಜ್ಯಗಳಲ್ಲಿ ಗಾಳಿಯ ಕಡಿಮೆ ಒತ್ತಡ ಪ್ರದೇಶ ಉಂಟಾಗಿದ್ದರ ಪರಿಣಾಮದಿಂದ ರಾಜ್ಯದಲ್ಲಿ ಮುಂಗಾರು ಚುರುಕಾಗಿದೆ. 

No comments:

Post a Comment

26.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ...