Advertise

21 July 2026

22.07. 2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

22.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬಿಡುವಿನ ಅವಧಿ ಹೆಚ್ಚಿರಬಹುದು. ದಿನದಲ್ಲಿ 2, 3 ಮಳೆ ಇರಬಹುದು. ಉತ್ತರ ಕನ್ನಡ ಜಿಲ್ಲೆಯಲ್ಲಿ ಮೋಡ ಹಾಗೂ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿವೆ. ದೀರ್ಘ ಸಮಯದ ಭಾರಿ ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಆದರೆ ಮುಂದಿನ 10 ದಿನಗಳವರೆಗೂ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸ್ವಲ್ಪ ಹೆಚ್ಚಿರಬಹುದು. ಆದರೂ ಜೋರು ಮಳೆಯ ಸಾಧ್ಯತೆಗಳು ಕಡಿಮೆಯಾಗಿದೆ. 
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜುಲೈ 24ರಿಂದ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ತುಮಕೂರು ಜಿಲ್ಲೆಯ ಒಂದೆರಡು ಕಡೆ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 2 ದಿವಸಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ನಂತರ ಕಡಿಮೆಯಾಗುವ ಸೂಚನೆಗಳಿವೆ. 

ಅರಬ್ಬಿ ಸಮುದ್ರದಲ್ಲಿ ಅಥವಾ ಬಂಗಾಳಕೊಲ್ಲಿಯಲ್ಲಿ ಸಧ್ಯಕ್ಕೆ ಯಾವುದೇ ಮಹತ್ವದ ವಿದ್ಯಮಾನಗಳು ಕಾಣಿಸುತ್ತಿಲ್ಲ. 
ಸೋಮಾಲಿಯ ಜೆಟ್ ವೇವ್ಸ್ ಪ್ರಭಾವದಿಂದ ಉತ್ತರ ಭಾರತದ ಬಹುತೇಕ ರಾಜ್ಯಗಳಲ್ಲಿ ಉತ್ತಮ ಮಳೆಯಾಗುವ ಲಕ್ಷಣಗಳಿವೆ. 

No comments:

Post a Comment

26.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ...