Advertise

22 July 2026

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸ್ವಲ್ಪ ಹೆಚ್ಚಿರಬಹುದು.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಬೆಳಗಾವಿ, ಧಾರವಾಡ, ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.

ಮಧ್ಯಪ್ರದೇಶ, ಉತ್ತರ ಪ್ರದೇಶ, ಛತ್ತೀಸಗಡ ರಾಜ್ಯಗಳಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆಯ ಪರಿಣಾಮದಿಂದ ರಾಜ್ಯದ ಅಲ್ಲಲ್ಲಿ ಮಳೆಯಾಗುತ್ತಿದೆ. 
ಎಲ್ ನಿನೋ ಪ್ರಭಾವ ಇದ್ದರೂ ತಿರುಗುವಿಕೆಯ ಪರಿಣಾಮದಿಂದ ರಾಜ್ಯದಲ್ಲಿ ಮಾತ್ರವಲ್ಲದೇ ದೇಶದ ಬಹುತೇಕ ರಾಜ್ಯಗಳಲ್ಲಿ ಮಳೆಯಾಗುತ್ತಿದೆ. 

No comments:

Post a Comment

26.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ...