ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬೆಳಿಗ್ಗೆಯಿಂದ ಬಿಸಿಲು, ಮೋಡ ಹಾಗೂ ಮಧ್ಯಾಹ್ನ ನಂತರ ಹ್ಹ, ಸಂಜೆ, ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬೆಳಿಗ್ಗೆಯಿಂದಲೇ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ.
ವಾಯುಭಾರ ಕುಸಿತವು ಗುಜರಾತ್ ತಲುಪಿದ್ದು, ಇದು ಶಿಥಿಲಗೊಳ್ಳುತ್ತಿದ್ದಂತೆಯೇ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸ್ವಲ್ಪ ಹೆಚ್ಚಿರಬಹುದು.
ಈಗಿನಂತೆ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದಂತೆ ಮಳೆಯ ಪ್ರಮಾಣವು ಕಡಿಮೆಯಾಗುವ ಸೂಚನೆಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಜಿಲ್ಲೆಗಳಲ್ಲಿ ವಾಯುಭಾರ ಕುಸಿತ ಪ್ರಭಾವದಿಂದ ಅಲ್ಲಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜುಲೈ 24ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ದಾವಣಗೆರೆ, ವಿಜಯನಗರ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ರಾಮನಗರ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜುಲೈ 29ರ ತನಕ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.
ನಿನ್ನೆಯ ಮಧ್ಯಪ್ರದೇಶದ ತಿರುವಿಕೆಯು ಗುಜರಾತ್ ತಲುಪಿದ್ದು, ನಾಳೆ ಅಥವಾ ನಾಡಿದ್ದು ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರೊಂದಿಗೆ ಮುಂಗಾರು ಮತ್ತೆ ದುರ್ಬಲಗೊಳ್ಳುವ ಸಾಧ್ಯತೆಗಳಿವೆ.
No comments:
Post a Comment