Advertise

27 July 2026

28.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

28.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಬಿಡುವಿನ ಅವಧಿ ಸ್ವಲ್ಪ ಹೆಚ್ಚಿರಬಹುದು. 
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ದಿನದ ಒಟ್ಟು ಮಳೆ ಸಾಮಾನ್ಯ 20.0ರಿಂದ 30.00mm ಗಳಷ್ಟಿರಬಹುದು. ಭಾರಿ ಮಳೆಯ ಸಾಧ್ಯತೆಗಳು ಕಡಿಮೆಯಾಗಿದೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸ್ವಲ್ಪ ಹೆಚ್ಚಿರಬಹುದು. 
ಮುಂದಿನ 10 ದಿನಗಳವರೆಗೂ ಸಾಮಾನ್ಯ ಮಳೆ ಮುಂದುವರಿಯಬಹುದು. ಆದರೆ ದಿನ ಕಳೆದಂತೆ ಮಳೆಯ ಪ್ರಮಾಣ ಕ್ರಮೇಣ ಕಡಿಮೆಯಾಗಬಹುದು. ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಪ್ರಭಲಗೊಂಡಲ್ಲಿ ಮಳೆ ಹೆಚ್ಚಾಗಬಹುದು. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರದಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬೆಂಗಳೂರು, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದೆರಡು ಕಡೆ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜುಲೈ 28ರಿಂದ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಆಗಸ್ಟ್ 2ರಿಂದ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ. 

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳದ ವಾಯುಭಾರ ಕುಸಿತವು ಜಾರ್ಖಂಡ್, ಮಧ್ಯಪ್ರದೇಶ ರಾಜ್ಯಗಳ ಮೂಲಕ ಸಾಗಿ ಬರುವ ಸಾಧ್ಯತೆಗಳಿದ್ದು, ಪರಿಸ್ಥಿತಿ ಕಾದು ನೋಡಬೇಕಾಗಿದೆ. ಮುಂಗಾರು ದುರ್ಬಲತೆ ಮುಂದುವರಿಯಲಿದೆ ಹಾಗೂ ವಾಯುಭಾರ ಕುಸಿತದ ಪ್ರಭಾವದಿಂದ ಮುಂಗಾರು ಈಗ ಅಲ್ಪ ಚೇತರಿಸಿಕೊಂಡಿದೆ. 

No comments:

Post a Comment

25.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂ...