Advertise

29 July 2026

30.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

30.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಸುಳ್ಯ ತಾಲ್ಲೂಕು ಸ್ವಲ್ಪ ಕಡಿಮೆ ಇರಬಹುದು.  
ಈಗಿನ ವಾಯುಭಾರ ಕುಸಿತವು ಆಗಸ್ಟ್ 1ರಂದು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರೊಂದಿಗೆ ಆಗಸ್ಟ್ 2ರಿಂದ ಮುಂಗಾರು ಸಹ ದುರ್ಬಲಗೊಳ್ಳಲಿದೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರಬಹುದು. ಶಿವಮೊಗ್ಗ ಜಿಲ್ಲೆಯಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಆಗಸ್ಟ್ 2ರಿಂದ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ‌ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್ 3ರಿಂದ ಅಲ್ಲಲ್ಲಿ ಮಳೆಯಾಗುವ ಲಕ್ಷಣಗಳಿವೆ. 

ಈಗಿನ ವಾಯುಭಾರ ಕುಸಿತವು ಉತ್ತರ ಆಂದ್ರಾ ತೆಲಂಗಾಣ, ಛತ್ತೀಸಗಡ ಮಧ್ಯಪ್ರದೇಶ ರಾಜ್ಯಗಳ ಮೂಲಕ ಸಾಗಿ ಜುಲೈ 31 ಅಥವಾ ಆಗಸ್ಟ್ 1ರಂದು ಗುಜರಾತ್ ತಲಪುವ ನಿರೀಕ್ಷೆಯಿದೆ. 
ಇದರೊಂದಿಗೆ ಶ್ರೀಲಂಕಾ ದಕ್ಷಿಣ ನೇರಕ್ಕೆ ಭೂಮಧ್ಯ ರೇಖೆಗಿಂತ ಕೆಳಗೆ ಹಿಂದೂ ಮಹಾಸಾಗರದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಇದರಿಂದ ಮುಂಗಾರು ಮತ್ತಷ್ಟು ದುರ್ಬಲಗೊಳ್ಳುವ ಸಾಧ್ಯತೆಗಳಿವೆ. 




No comments:

Post a Comment

25.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂ...