ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಬಿಸಿಲು, ಮೋಡ ಹಾಗೂ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಕಳೆದ ಎರಡು ದಿನಗಳಿಂದ ಕರಾವಳಿ ತೀರ ಭಾಗಗಳಲ್ಲಿ ಮಳೆ ಕಡಿಮೆ ಇತ್ತು. ಆದರೆ ಇವತ್ತು ಮಧ್ಯಾಹ್ನ ನಂತರ ಅಥವಾ ಸಂಜೆಯಿಂದ ಮಳೆ ಸ್ವಲ್ಪ ಹೆಚ್ಚಾಗುವ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 2ರಿಂದ ಮಳೆ ಕಡಿಮೆಯಾಗಬಹುದು.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಮಲೆನಾಡಿನ ಈ ಮಳೆಯು ವಾಯುಭಾರ ಕುಸಿತ ಪರಿಣಾಮದಿಂದ ಉಂಟಾಗಿದೆ. ವಾಯುಭಾರ ಕುಸಿತವು ಶಿಥಿಲ ಅಥವಾ ರಾಜಸ್ಥಾನ ಕಡೆಗೆ ಸಾಗುತ್ತಿದ್ದಂತೆಯೇ ಮಳೆಯ ಪ್ರಮಾಣ ಕಡಿಮೆಯಾಗಬಹುದು.
ಉತ್ತರ ಒಳನಾಡು :ರಾಜ್ಯದ ಉತ್ತರ ಒಳನಾಡಿನ ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದರೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದಂತೆ ಮಳೆ ಕಡಿಮೆಯಾಗಬಹುದು.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ವಾಯುಭಾರ ಕುಸಿತದ ಪರಿಣಾಮ ಕಡಿಮೆ ಇರುವುದರಿಂದ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ವಾಯುಭಾರ ಕುಸಿತವು ಶಿಥಿಲಗೊಂಡ ನಂತರ ಆಗಸ್ಟ್ 3ರಿಂದ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತವು ಇನ್ನೆರಡು ದಿನಗಳಲ್ಲಿ ಗುಜರಾತ್ ಅಥವಾ ರಾಜಸ್ಥಾನ ತಲುಪಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರೊಂದಿಗೆ ಮುಂಗಾರು ದುರ್ಬಲವಾಗುವ ಸಾಧ್ಯತೆಗಳಿವೆ.
No comments:
Post a Comment