Advertise

31 August 2026

01.09.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

01.09.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ದಿನದಲ್ಲಿ ಒಂದೆರಡು ಸಣ್ಣ ಅವಧಿಯ ಸಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಒಂದೆರಡು ಮಳೆ ಹೆಚ್ಚಿರಬಹುದು. 
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆಗಳು ಕಡಿಮೆಯಾಗಿದ್ದು, ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ದಿನಕ್ಕೆ ಒಂದೆರಡು ಸಣ್ಣ ಅವಧಿಯ ಮಳೆಯ ಸಾಧ್ಯತೆಗಳಿವೆ. 

ಮಲೆನಾಡು : ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಸಕ್ಲೇಶ್ಪುರ ಹಾಗೂ ಮಲೆನಾಡಿನ ಇತರ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರಿಂದ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ. ಇನ್ನೂ ಸಮಯವಿರುವುದರಿಂದ ಪರಿಸ್ಥಿತಿ ಬದಲಾಗಬಹುದು. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ಸೆಪ್ಟೆಂಬರ್ 2ನೇ ತಾರೀಕಿನಿಂದ ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಸಾಧ್ಯತೆಗಳಿವೆ. ಉಳಿದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡು ಚಾಮರಾಜನಗರದ ಗುಂಡ್ಲುಪೇಟೆ ಸುತ್ತಮುತ್ತ ಭಾಗಗಳಲ್ಲಿ ಮಧ್ಯಾಹ್ನ ನಂತರ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 3ರಿಂದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಪಶ್ಚಿಮ ಬಂಗಾಳ ಕರಾವಳಿಯಲ್ಲಿನ ವಾಯುಭಾರ ಕುಸಿತ ಪರಿಣಾಮವಾಗಿ ಪಶ್ಚಿಮ ಬಂಗಾಳ, ಒಡಿಸ್ಸಾ, ಜಾರ್ಖಂಡ್, ಮಧ್ಯಪ್ರದೇಶ, ಛತ್ತೀಸಗಡ, ಬಿಹಾರ, ಉತ್ತರ ಪ್ರದೇಶ ರಾಜ್ಯಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 
ರಾಜ್ಯದಲ್ಲಿ ಇದರ ಪ್ರಭಾವ ಅಷ್ಟೇನು ಗೋಚರಿಸುತ್ತಿಲ್ಲ. 



29 August 2026

30.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

30.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : 

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಣ್ಣ ಅವಧಿಯ ಬಿಟ್ಟು ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ತೀರ ಭಾಗಗಳಲ್ಲಿ ಒಂದೆರಡು ಮಳೆ ಹೆಚ್ಚಿರಬಹುದು. ಕಾರ್ಕಳ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಒಂದೆರಡು ಮಳೆ ಹೆಚ್ಚಿರಬಹುದು. 
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ  ಸೆಪ್ಟೆಂಬರ್ 3 ರ ತನಕ ಇದೇ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಎರಡು ಮೂರು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ಒಂದೆರಡು ತುಂತುರು ಮಳೆಯ ಸಾಧ್ಯತೆಗಳಿವೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 2 ಹಾಗೂ 3ರಂದು ಮಳೆಯ ಪ್ರಮಾಣ ಹೆಚ್ಚಿರುವ ಸಾಧ್ಯತೆಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಗದಗ, ಬಳ್ಳಾರಿ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾವೇರಿ, ಬಾಗಲಕೋಟೆ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯಲಿದೆ. 
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸೆಪ್ಟೆಂಬರ್ 3ರಿಂದ ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳ ಅಲ್ಲಲ್ಲಿ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 2ರಿಂದ ಅಲ್ಲಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ. 

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಮಧ್ಯಮ ಸ್ತರದಲ್ಲಿ ಈಗಾಗಲೇ ತಿರುವಿಕೆ ಉಂಟಾಗಿದ್ದು, ಇದರ ಪ್ರಭಾವದಿಂದ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಲಕ್ಷಣಗಳಿವೆ. 


28 August 2026

29.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

29.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಸುಳ್ಯ, ಕಡಬ ತಾಲೂಕುಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಒಂದೆರಡು ಮಳೆ ಹೆಚ್ಚಿರಬಹುದು. 
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5 ಅಥವಾ 6ರ ತನಕ ಇದೇ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ 

ಮಲೆನಾಡು : ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಹಾಸನದ ಸಕ್ಲೇಶ್ಪುರ ಸುತ್ತಮುತ್ತ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಶಿವಮೊಗ್ಗ ಜಿಲ್ಲೆಯ ಉತ್ತರ ಭಾಗದಲ್ಲಿ ( ಉತ್ತರ ಕನ್ನಡ ಹಾಗೂ ಹಾವೇರಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ) ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ, ಸೆಪ್ಟೆಂಬರ್ 2 ಹಾಗೂ 3ರಂದು ವಾಯುಭಾರ ಕುಸಿತದ ಪರಿಣಾಮದಿಂದ ಅಲ್ಲಲ್ಲಿ ಮಳೆಯ ಸಾಧ್ಯತೆಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಹಾವೇರಿ ಹಾಗೂ ಗದಗ ಜಿಲ್ಲೆಗಳ ಒಂದೆರಡು ಕಡೆ, ಬಳ್ಳಾರಿ ಹಾಗೂ ಗದಗ ಗಡಿಭಾಗಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 6ರಿಂದ ಅಲ್ಲಲ್ಲಿ ಮಳೆಯಾಗುವ ಲಕ್ಷಣಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಹಾಸನ ತುಮಕೂರು ಗಡಿ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸಿದ್ದು, ಸೆಪ್ಟೆಂಬರ್ 2 ಹಾಗೂ 3ರಂದು ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. 

ಸೆಪ್ಟೆಂಬರ್ 1ರಂದು ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಗಳಿವೆ. 

ಏಷ್ಯಾದ ಪಶ್ಚಿಮೋತ್ತರ ಭಾಗಗಳಿಂದ ಹಾಗೂ ಯುರೋಪ್ ಕಡೆಯಿಂದ ಅರಬ್ಬಿ ಸಮುದ್ರದ ಕಡೆಗೆ ಬೀಸುವ ಮಾರುತಗಳ ಪ್ರಭಾವದಿಂದ ಮುಂಗಾರು ದುರ್ಬಲಗೊಂಡಿದ್ದು, ಸೆಪ್ಟೆಂಬರ್ 1ರಂದು ಬಾಂಗ್ಲಾ ಕರಾವಳಿಯಲ್ಲಿ ಉಂಟಾಗಲಿರುವ ತಿರುವಿಕೆ ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ನಿರ್ಣಾಯಕ ಪಾತ್ರ ವಹಿಸುವ ಸಾಧ್ಯತೆ ಇದೆ. 

27 August 2026

28.08.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


28.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ದಿನದಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಆದರೆ ಮೋಡದ ಚಲನೆ ವಾಯವ್ಯದಿಂದ ಆಗ್ನೇಯಕ್ಕೆ ಇರುವುದರಿಂದ ಕಡಬ, ಸುಳ್ಯ ತಾಲ್ಲೂಕುಗಳಲ್ಲಿ ಒಂದೆರಡು ಮಳೆ ಹೆಚ್ಚಿರಲಿದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ದಿನ ಕಳೆದಂತೆ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಹಾಗೂ ಸಕ್ಲೇಶ್ಪುರ ಸುತ್ತಮುತ್ತ ಪ್ರದೇಶಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 1ರ ತನಕ ಮಳೆಯ ಸಾಧ್ಯತೆಗಳು ಕಡಿಮೆಯಾಗಿದೆ. 2ನೇ ತಾರೀಕಿನಿಂದ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಳ್ಳಾರಿ ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಕಡಿಮೆಯಾಗಿದೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ವಿಜಯನಗರ ತುಮಕೂರು ಹಾಗೂ ಹಾಸನದ ಪೂರ್ವ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 2ರಿಂದ ಅಲ್ಲಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ. 

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಸೆಪ್ಟೆಂಬರ್ 1ರಿಂದ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಪರಿಣಾಮ ಕಾದು ನೋಡಬೇಕಾಗಿದೆ. 

25 August 2026

26.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಮಳೆಯ ನಡುವೆ ಬಿಡುವಿನ ಸಮಯ ಹೆಚ್ಚಿರಬಹುದು. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಸ್ವಲ್ಪ ಕಡಿಮೆ ಇರಬಹುದು. 
ಈಗಿನಂತೆ ಆಗಸ್ಟ್ 26ರಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಆದರೂ ದಿನದಲ್ಲಿ ಒಂದೆರಡು ಸಣ್ಣ ಪ್ರಮಾಣದ ಮಳೆಯು ಆಗಸ್ಟ್ 31ರ ಮುಂದುವರಿಯುವ ಸಾಧ್ಯತೆಗಳಿವೆ. 

ಮಲೆನಾಡು : ಮೋಡದ ಚಲನೆಯು ವಾಯವ್ಯದಿಂದ ಆಗ್ನೇಯಕ್ಕೆ ಇರುವುದರಿಂದ ಕೊಡಗಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಇವತ್ತು ಮಳೆಯ ಮುಂದುವರಿಯುವ ಮುನ್ಸೂಚನೆ ಇದೆ. ಉಳಿದ ಕೊಡಗಿನ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಹಾಸನದ ಸಕ್ಲೇಶ್ಪುರ., ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಆಗಸ್ಟ್ 26ರಿಂದ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಗದಗ ಜಿಲ್ಲೆಯಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳ ಗದಗ ಗಡಿಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ. ಉಳಿದ ಬಳ್ಳಾರಿ, ಕೊಪ್ಪಳ ಹಾಗೂ ಧಾರವಾಡ, ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 
ಈಗಿನಂತೆ ರಾಜ್ಯದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಆಗಸ್ಟ್ 26ರಿಂದ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ದಾವಣಗೆರೆ, ವಿಜಯನಗರ, ಚಿತ್ರದುರ್ಗ, ತುಮಕೂರು (ಪಾವಗಢ ಸಹಿತ) ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್ 26ರಿಂದ ಮಳೆಯ ಪ್ರಮಾಣವು ಕಡಿಮೆಯಾಗಿ ಬಿಸಿಲು ಮತ್ತು ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 

ಫೆಸಿಫಿಕ್ ಸಾಗರದ ಜಪಾನ್ ಕರಾವಳಿಯಲ್ಲಿ ಪ್ರಭಲ ಚಂಡಮಾರುತವು ಮುಂದುವರಿದಿದೆ. ಒಂದರ ನಂತರ ಒಂದರಂತೆ ಮಹಾ ಚಂಡಮಾರುತಗಳ ಸರಣಿ ಹೀಗೆಯೇ ಮುಂದುವರಿದರೆ ನಮ್ಮ ಹಿಂಗಾರು ಮಾರುತಗಳಿಗೆ ಹಿನ್ನಡೆ ಉಂಟಾಗುವ ಸಾಧ್ಯತೆಗಳೂ ಇವೆ. 


24 August 2026

25.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಮಳೆ ಬಿಡುವಿನ ಅವಧಿ ಹೆಚ್ಚಿರಬಹುದು.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 26ರ ತನಕ ಇದೇ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. 27ರಿಂದ ಮಳೆಯ ಪ್ರಮಾಣ ಕಡಿಮೆಯಾಗಿ, ದಿನದಲ್ಲಿ ಅಲ್ಲಲ್ಲಿ ಒಂದೆರಡು ಸಣ್ಣ ಅವಧಿಯ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು, ಹಾಸನದ ಸಕ್ಲೇಶ್ಪುರ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ ಹೆಚ್ಚಿರುವ ಮುನ್ಸೂಚನೆ ಇದೆ.
ಈಗಿನಂತೆ ಆಗಸ್ಟ್ 26ರ ನಂತರ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕಲಬುರ್ಗಿ, ರಾಯಚೂರು, ಯಾದಗಿರಿ, ಬೀದರ್ ಜಿಲ್ಲೆಗಳ ಒಂದೆರಡು ಕಡೆ ಹಾಗೂ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್ 25ರಿಂದ ಮಳೆಯ ಸಾಧ್ಯತೆಗಳು ಕಡಿಮೆಯಾಗುತ್ತಿವೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ಹಾಸನ ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಚಿತ್ರದುರ್ಗ ಜಿಲ್ಲೆಯಲ್ಲಿ  ಬಿಸಿಲು, ಮೋಡದ ವಾತಾವರಣ ಇರಬಹುದು. ಆದರೆ ಗಾಳಿಯ ಒತ್ತಡ ಹೆಚ್ಚಿದ್ದರೆ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್ 25ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

 ಒಡಿಸ್ಸಾದಲ್ಲಿರುವುದು ವಾಯುಭಾರ ತಿರುಗುವಿಕೆಯು ಹಾಗೆಯೇ ಮುಂದುವರಿದಿದ್ದು, ಆಗಸ್ಟ್ 27ರ ಮುಂಜಾನೆ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರೊಂದಿಗೆ ರಾಜ್ಯದಲ್ಲಿ ಮಳೆಯ ಪ್ರಮಾಣವೂ ಕಡಿಮೆಯಾಗಲಿದೆ.
ಫೆಸಿಫಿಕ್ ಸಾಗರದ ಜಪಾನ್ ನ ದಕ್ಷಿಣ ಕರಾವಳಿ ಸಮೀಪ ಉಂಟಾಗಿರುವ ಚಂಡಮಾರುತವು ಅತ್ಯಂತ ಪ್ರಭಲವಾಗಿದ್ದು, ಆಗಸ್ಟ್ 28 ಅಥವಾ 29ರಂದು ಥೈವಾನ್ ಮೂಲಕ ಚೀನಾ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ.

23 August 2026

24.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸ್ವಲ್ಪ ಮಟ್ಟಿಗೆ ಕಡಿಮೆ ಇರಬಹುದು.
ಈಗಿನಂತೆ ಆಗಸ್ಟ್ 25ರ ತನಕ ಇದೇ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು, ಹಾಸನದ ಸಕ್ಲೇಶ್ಪುರ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಆದರೆ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 25ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಉತ್ತರ ಒಳನಾಡು : ಇವತ್ತು ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 2 ದಿವಸಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ದಾವಣಗೆರೆ, ವಿಜಯನಗರ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಹಾಸನ, ತುಮಕೂರು ಉತ್ತರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಗಳಿವೆ. 
ಈಗಿನಂತೆ ಆಗಸ್ಟ್ 25ರ ತನಕ ರಾಜ್ಯದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಬಂಗಾಳಕೊಲ್ಲಿಯ ಈಗಿನ ತಿರುವಿಕೆಯು ಪಶ್ಚಿಮ ಬಂಗಾಳ, ಒಡಿಸ್ಸಾ ಕರಾವಳಿಯಲ್ಲಿ ಭೂ ಪ್ರವೇಶಿಸುತ್ತಿದ್ದಂತೆಯೆ ಮುಂಗಾರು ಸ್ವಲ್ಪ ಚುರುಕಾಗಿದೆ. 
ಆಗಸ್ಟ್ 25ರ ನಂತರ ಈ ತಿರುಗುವಿಕೆಯು ಶಿಥಿಲಗೊಳ್ಳುತ್ತಿದ್ದಂತೆಯೇ ಮುಂಗಾರು ಮತ್ತೆ ದುರ್ಬಲಗೊಳ್ಳಲಿದೆ. 

22 August 2026

23.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


23.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಮುಂಜಾನೆ ಕಾಸರಗೋಡು ನಿಂದ ಉಡುಪಿ ತನಕ ಕರಾವಳಿ ತೀರ ಹೊರತು ಪಡಿಸಿ ಉಳಿದ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗಿತ್ತು. ಮೋಡದ ಚಲನೆ ವಾಯವ್ಯದಿಂದ ಆಗ್ನೇಯಕ್ಕೆ ಇರುವುದರಿಂದ ಮಡಿಕೇರಿ ಘಾಟಿಯ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಬಿಡುವಿನ ಅವಧಿ ಸ್ವಲ್ಪ ಹೆಚ್ಚಿರಬಹುದು. ಉಳಿದ ಕರಾವಳಿ ಭಾಗಗಳಲ್ಲಿ ದಿನದಲ್ಲಿ ಒಂದೆರಡು ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಆಗಸ್ಟ್ 26ರಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು, ಹಾಸನದ ಸಕ್ಲೇಶ್ಪುರ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಆಗಸ್ಟ್ 23 ರಿಂದ 25ರ ತನಕ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಮಳೆಯ ಸಾಧ್ಯತೆಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಧಾರವಾಡ, ಗದಗ ಹಾಗೂ ಬಳ್ಳಾರಿ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಗಳಿವೆ. 
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್ 25ರ ತನಕ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್ 25ರ ತನಕ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಮಧ್ಯಮ ಸ್ತರದಲ್ಲಿ ಬಾಂಗ್ಲಾದೇಶ ಕರಾವಳಿಯಲ್ಲಿ ಉಂಟಾಗಿರುವ ಸಣ್ಣ ಪ್ರಮಾಣದ ತಿರುಗುವಿಕೆ ಶಿಥಿಲಗೊಳ್ಳುತ್ತಿದ್ದಂತೆಯೇ ಮುಂಗಾರು ಮತ್ತಷ್ಟು ದುರ್ಬಲಗೊಳ್ಳುವ ಸಾಧ್ಯತೆಗಳಿವೆ. 

21 August 2026

22.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

22.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಕಡಿಮೆ ಇದ್ದು, ಮೋಡ ಹಾಗೂ ಅಲ್ಲಲ್ಲಿ ಎರಡು, ಮೂರು ಮಳೆಯ ಮುನ್ಸೂಚನೆ ಇದೆ. ಮಳೆಯ ಸಮಯವೂ ಬಿಡುವಿನ ಸಮಯವೂ ಹೆಚ್ಚಿರಬಹುದು.
ಈಗಿನಂತೆ ಆಗಸ್ಟ್ 26ರ ತನಕವೂ ಇದೇ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. 23 ರಿಂದ 25ರ ತನಕ ಒಂದೆರಡು ಮಳೆ ಹೆಚ್ಚಿರಬಹುದು. 

ಮಲೆನಾಡು : ಕೊಡಗು, ಹಾಸನದ ಸಕ್ಲೇಶ್ಪುರ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ಆಗಸ್ಟ್ 23 ರಿಂದ 25ರ ತನಕ ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು, ಕೊಡಗು, ಸಕ್ಲೇಶ್ಪುರ ಮಳೆ ಕಡಿಮೆ ಇರಬಹುದು. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಉತ್ತರ ಒಳನಾಡಿನಲ್ಲಿ ಆಗಸ್ಟ್ 25ರ ತನಕ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ತುಮಕೂರು, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 23ರಿಂದ 25ರ ತನಕ ಮಳೆ ಸ್ವಲ್ಪ ಹೆಚ್ಚಿರಬಹುದು. 

19.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂ...