Advertise

01 August 2026

02.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

02.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಜಿಲ್ಲೆಯಲ್ಲಿ ಬಿಟ್ಟು ಬಿಟ್ಟು ಗಾಳಿ ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ಬಿಟ್ಟು ಬಿಟ್ಟು ಸಣ್ಣ ಪ್ರಮಾಣದ ಗಾಳಿ ಸಹಿತ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಉಳಿದ ತಾಲ್ಲೂಕುಗಳಲ್ಲಿ ಹಾಗೂ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 3ರಿಂದ ಮಳೆಯ ಪ್ರಮಾಣ ತುಂಬಾ ಕಡಿಮೆಯಾಗುವ ಸೂಚನೆಗಳಿವೆ. ಆದರೂ ಮಳೆ ಪೂರ್ತಿ ಬಿಟ್ಟು ಸಿಗುವ ಸಾಧ್ಯತೆಗಳಿಲ್ಲ. ಸಿಕ್ಕ ಅವಕಾಶದಲ್ಲಿ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸುವುದು ಉತ್ತಮ. 

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 3ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ತೋಟಗಾರಿಕಾ ಬೆಳೆಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 3 ದಿವಸಗಳ ಕಾಲ ಮಳೆ ಕಡಿಮೆಯಾಗಲಿದ್ದು, ಆಗಸ್ಟ್ 5ರಿಂದ ಮತ್ತೆ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ದಾವಣಗೆರೆ, ವಿಜಯನಗರ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಚಿತ್ರದುರ್ಗ ಜಿಲ್ಲೆಯಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 2 ದಿವಸಗಳ ಕಾಲ ಮಳೆ ಕಡಿಮೆಯಾಗಲಿದ್ದು, ಆಗಸ್ಟ್ 4ರಿಂದ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಗಾಳಿಯ ದಿಕ್ಕು ವಾಯವ್ಯದಿಂದ ಆಗ್ನೇಯಕ್ಕೆ ಚಲಿಸುತ್ತಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಕಡಬ ಹಾಗೂ ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚು ಸುರಿಯುತ್ತಿದೆ. 
ಗುಜರಾತ್ ತಲುಪಿರುವ ವಾಯುಭಾರ ಕುಸಿತವು ಇವತ್ತು ಸಂಜೆ ಅಥವಾ ರಾತ್ರಿ ಸಂಪೂರ್ಣ ಶಿಥಿಲಗೊಳ್ಳುವ ಲಕ್ಷಣಗಳಿವೆ. 
ಆಗಸ್ಟ್ 4ರಂದು ಮಧ್ಯಮ ಸ್ತರದಲ್ಲಿ ಶ್ರೀಲಂಕಾ ಪೂರ್ವ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಸಾಗುವ ಹಾದಿ ಹಾಗೂ ತೀವ್ರತೆ ಕಾದು ನೋಡಬೇಕಾಗಿದೆ. 

No comments:

Post a Comment

24.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ...