ಕರಾವಳಿ : ರಾಜ್ಯದ ಕರಾವಳಿ ತೀರ ಭಾಗಗಳಲ್ಲಿ ನಿನ್ನೆ ರಾತ್ರಿ ಅನಿರೀಕ್ಷಿತವಾಗಿ ಉತ್ತಮ ಮಳೆಯಾಗಿತ್ತು.
ಕಾಸರಗೋಡು ಜಿಲ್ಲೆಯಲ್ಲಿ ಮಧ್ಯಾಹ್ನ ನಂತರ ಮಳೆ ಕಡಿಮೆಯಾಗುವ ಲಕ್ಷಣಗಳಿವೆ. ದಕ್ಷಿಣ ಕನ್ನಡದಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರ ತನಕ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುಂದುವರಿಯುವ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 10ರ ತನಕ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ರಾಯಚೂರು, ಬಳ್ಳಾರಿ, ಯಾದಗಿರಿ, ಬೀದರ್, ಕಲಬುರ್ಗಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್ 9ರ ತನಕ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಸಣ್ಣ ಪ್ರಮಾಣದ ಗುಡುಗು ಸಾಧ್ಯತೆಯೂ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಮಳೆಯ ಸಾಧ್ಯತೆಗಳಿವೆ.
ಫೆಸಿಫಿಕ್ ಸಾಗರದ ಜಪಾನ್ ನ ಆಗ್ನೇಯ ಭಾಗದಲ್ಲಿ ಅತಿ ಪ್ರಭಲ ಚಂಡಮಾರುತ ರೂಪುಗೊಂಡಿದ್ದರಿಂದ ಹಿಂದೂ ಮಹಾಸಾಗರದ ಆಸ್ಟ್ರೇಲಿಯಾ ಕಡೆಯಿಂದ ಅರಬ್ಬಿ ಸಮುದ್ರದ ಕಡೆಗೆ ಬೀಸುವ ಮಾರುತಗಳು ನೇರವಾಗಿ ಬಂಗಾಳಕೂಲ್ಲಿಯ ಮೂಲಕ ತೈವಾನ್, ಫಿಲಿಪ್ಪೀನ್ಸ್ ಕಡೆಗೆ ಸೆಳೆಯುತ್ತಿದೆ. ಇದರಿಂದ ಅರಬ್ಬಿ ಸಮುದ್ರದಲ್ಲಿ ಮುಂಗಾರು ದಿನ ಕಳೆದಂತೆ ದುರ್ಬಲಗೊಳ್ಳುವ ಸಾಧ್ಯತೆಗಳಿವೆ.
ಈ ಪ್ರಭಲ ಚಂಡಮಾರುತವು ಜಪಾನ್ ದಕ್ಷಿಣ ಕರಾವಳಿ, ದಕ್ಷಿಣ ಕೊರಿಯಾ, ಚೀನಾ ಹಾಗೂ ತೈವಾನ್ ದೇಶಗಳಲ್ಲಿ ಭಾರಿ ಪ್ರಮಾಣದ ಅನಾಹುತಗಳನ್ನ್ನು ಸೃಷ್ಟಿ ಮಾಡಬಹುದು.
No comments:
Post a Comment