ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಗುಡುಗು ಸಾಧ್ಯತೆಯೂ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಟ್ಟು ಬಿಟ್ಟು ಮಳೆ ಇದ್ದರೂ ಪ್ರಮಾಣ ಸ್ವಲ್ಪ ಕಡಿಮೆ ಇರಬಹುದು.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇವತ್ತು ಹಾಗೂ ನಾಳೆ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ತೋಟಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸ್ವಲ್ಪ ಕಡಿಮೆ ಇರಬಹುದು. ಆಗಸ್ಟ್ 9ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಆಗಸ್ಟ್ 9ರಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗಬಹುದು.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬೀದರ್ ನ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್ 9ರ ತನಕ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಯ ಒಂದೆರಡು ಕಡೆ, ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಧಾರಣ ಗುಡುಗು ಸಾಧ್ಯತೆಯೂ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್ 8ರ ತನಕ ಅಲ್ಲಲ್ಲಿ ಮಳೆ ಮುಂದುವರಿಯುವ ಸೂಚನೆಗಳಿವೆ.
ಜಪಾನ್ ದಕ್ಷಿಣ ಕರಾವಳಿಯಲ್ಲಿ ಅತೀ ಬೃಹತ್ ಚಂಡಮಾರುತವು ಬಂಗಾಳಕೊಲ್ಲಿಯ ಗಾಳಿಯನ್ನು ಸೆಳೆಯುತ್ತಿರುವುದರಿಂದ ಆಸ್ಟ್ರೇಲಿಯಾ ಕಡೆಯಿಂದ ಬೀಸುವ ಮಾರುತಗಳು ನೇರವಾಗಿ ಬಂಗಾಳಕೂಲ್ಲಿ ಸೇರುತ್ತಿವೆ.
ಇದರಿಂದ ಮುಂದಿನ ದಿನಗಳಲ್ಲಿ ಮುಂಗಾರು ದುರ್ಬಲವಾಗುವ ಸಾಧ್ಯತೆಗಳಿವೆ.
No comments:
Post a Comment