ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರಬಹುದು. (ಆದರೂ ನಿನ್ನೆಗಿಂತ ಕಡಿಮೆ ಇರಬಹುದು)
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಹೆಚ್ಚು ಮಳೆ ಇರಬಹುದು.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 10ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ, ಬಳ್ಳಾರಿ, ವಿಜಯಪುರ, ಬೀದರ್, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಪ್ಪಳ, ಬಳ್ಳಾರಿ, ರಾಯಚೂರು, ಕಲಬುರ್ಗಿ ಜಿಲ್ಲೆಗಳ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ) ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಈ ಸಲದ ಮುಂಗಾರು ಅವಧಿಯಲ್ಲಿ ಮೇಲ್ಸ್ತರದ ಗಾಳಿಯ ಸಂಚಾರವು ದುರ್ಬಲವಾಗಿದ್ದು ಹಾಗೂ ಮಧ್ಯಮ ಸ್ತರದಲ್ಲಿ ಪ್ರಭಲವಾಗಿರವಂತೆ ಕಾಣುತ್ತಿದೆ. ಇದೇ ಕಾರಣದಿಂದ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಿದೆ.
ಇದಕ್ಕೆ ಪೂರಕವಾಗಿ ದಕ್ಷಿಣ ಜಪಾನ್ ನ ಪ್ರಬಲ ಚಂಡಮಾರುತವು ಮಧ್ಯಮ ಸ್ತರದಲ್ಲಿ ಅತ್ಯಂತ ಪ್ರಬಲವಾಗಿದೆ.
No comments:
Post a Comment