Advertise

07 August 2026

08.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

08.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು  ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಟ್ಟು ಬಿಟ್ಟು ಮಳೆ ಇದ್ದರೂ ಪ್ರಮಾಣ ಸ್ವಲ್ಪ ಕಡಿಮೆ ಇರಬಹುದು.
ಈಗಿನಂತೆ ಆಗಸ್ಟ್ 8ರಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಬಿಡುವಿನ ಸಮಯ ಸ್ವಲ್ಪ ಹೆಚ್ಚಿರಿವ ಲಕ್ಷಣಗಳಿವೆ. ಆಗಸ್ಟ್ 9ರಿಂದ ತೋಟಗಳಿಗೆ ಔಷಧಿ ಸಿಂಪಡಿಸಲು ಸಣ್ಣ ಅವಕಾಶಗಳು ಸಿಗಬಹುದು. 

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆ ಇದ್ದರೆ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಮಳೆ ಹೆಚ್ಚಿರಬಹುದು. 
ಈಗಿನಂತೆ ಆಗಸ್ಟ್ 8ರಿಂದ ಮಳೆಯ ಪ್ರಮಾಣ ಇಳಿಕೆಯಾಗಲಿದೆ. 

ಉತ್ತರ ಒಳನಾಡು :  ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಗದಗ, ಬಾಗಲಕೋಟೆ, ವಿಜಯಪುರ, ಬಳ್ಳಾರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ. 
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್ 14ರ ತನಕ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ ಬೆಂಗಳೂರು ಗ್ರಾಮಾಂತರ ಹಾಗೂ ನಗರ, ತುಮಕೂರು (ಪಾವಗಢ ಸಹಿತ) ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಗಳಿವೆ. 

ದಕ್ಷಿಣ ಜಪಾನ್ ಕಡಲಿನ ಬೃಹತ್ ಚಂಡಮಾರುತವು ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯ ಮಾರುತಗಳನ್ನು ತನ್ನತ್ತ ಸೆಳೆಯುತ್ತಿರುವುದರಿಂದ ಮುಂಗಾರು ಚುರುಕಾಗಿದೆ. ಸುಮಾರು ಆಗಸ್ಟ್ 13ರ ನಂತರ ಆ ಚಂಡಮಾರುತವು ಶಿಥಿಲಗೊಳ್ಳುತ್ತಿದ್ದಂತೆಯೇ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆಗಳಿವೆ. 

No comments:

Post a Comment

24.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ...