ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಬಿಸಿಲು, ಮೋಡ ಹಾಗೂ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬಿಡುವಿನ ಅವಧಿ ಸ್ವಲ್ಪ ಹೆಚ್ಚಿರಬಹುದು. ಕರಾವಳಿ ಭಾಗಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಎರಡು, ಮೂರು ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ಆಗಸ್ಟ್ 10ರಿಂದ ಮಳೆ ಮತ್ತೂ ಕಡಿಮೆಯಾಗುವ ಲಕ್ಷಣಗಳಿವೆ. ಆದರೆ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಮಲೆನಾಡು : ಕೊಡಗು, ಹಾಸನದ ಸಕ್ಲೇಶ್ಪುರ ಸುತ್ತಮುತ್ತ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡ ದೊಂದಿಗೆ ಒಂದೆರಡು ತುಂತುರು ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ಆಗಸ್ಟ್ 10ರಿಂದ ಮಳೆ ಮತ್ತೂ ಕಡಿಮೆಯಾಗುವ ಲಕ್ಷಣಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಹಾವೇರಿ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್ 14ರ ತನಕ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರಿನ ಒಂದೆರಡು ಕಡೆ ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಚಿಕ್ಕಬಳ್ಳಾಪುರ, ಪಾವಗಢ, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್ 12ರ ತನಕ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಮಧ್ಯಮ ಸ್ತರದಲ್ಲಿ ಅತಿ ಪ್ರಭಲವಾಗಿರುವ ಜಪಾನ್ ಚಂಡಮಾರುತವು ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯ ಮಾರುತಗಳನ್ನು ತನ್ನತ್ತ ಸೆಳೆಯುತ್ತಿರುವುದರಿಂದ ಹಾಗೂ ಪಶ್ಚಿಮ ಬಂಗಾಳ, ಜಾರ್ಖಂಡ್, ಬಿಹಾರ ರಾಜ್ಯಗಳಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದರ ಪರಿಣಾಮದಿಂದ ಮುಂಗಾರು ಚುರುಕಾಗಿದೆ.
ಈ ಚಂಡಮಾರುತವು ಶಿಥಿಲಗೊಳ್ಳುತ್ತಿದ್ದಂತೆಯೇ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆಗಳಿವೆ.
ಆದರೆ ಇದೇ ಸಂದರ್ಭದಲ್ಲಿ ಜಪಾನ್ ನ ಆಗ್ನೇಯ ಕರಾವಳಿ ಸಮೀಪ ಇನ್ನೊಂದು ಬೃಹತ್ ಚಂಡಮಾರುತವು ಆರಂಭವಾಗೊಳ್ಳುವ ಲಕ್ಷಣಗಳಿವೆ.
No comments:
Post a Comment