ಕರಾವಳಿ : ಕಾಸರಗೋಡು ಜಿಲ್ಲೆಯಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಇದ್ದು, ಸಂಜೆ ಹಾಗೂ ರಾತ್ರಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಘಟ್ಟದ ಕೆಳಗಿನ ಪ್ರದೇಶಗಳ ಸುತ್ತಮುತ್ತ 2, 3 ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮಧ್ಯಾಹ್ನ ನಂತರ, ರಾತ್ರಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ಕ್ಷೀಣಿಸಿದ್ದು, ಅಲ್ಲಲ್ಲಿ ಒಂದೆರಡು ಸಣ್ಣ ಅವಧಿಯ ಸಮಾನ್ಯ ಮಳೆಯ ಸಾಧ್ಯತೆಗಳಿವೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಒಂದೆರಡು ಮಳೆ ಹೆಚ್ಚಿರಬಹುದು. ಆಗಸ್ಟ್ 17 ಅಥವಾ 18ರಿಂದ ಬಿಸಿಲು ಹಾಗೂ ಮೋಡದ ವಾತಾವರಣ ಇರಬಹುದು.
ಮಲೆನಾಡು : ಕೊಡಗು, ಹಾಸನದ ಸಕ್ಲೇಶ್ಪುರ ಸುತ್ತಮುತ್ತ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬಿಡುವಿನ ಅವಧಿ ಹೆಚ್ಚಿರಬಹುದು.
ಈಗಿನಂತೆ ಆಗಸ್ಟ್ 11ರಿಂದ ಮಳೆ ಮತ್ತಷ್ಟು ಕಡಿಮೆಯಾಗುವ ಲಕ್ಷಣಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡಿನಲ್ಲಿ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆಗಳು ಕ್ಷೀಣಿಸಿದ್ದು, ಆಗಸ್ಟ್ 14ರ ನಂತರ ಆ ಜಿಲ್ಲೆಗಳಲ್ಲೂ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.
ದಕ್ಷಿಣ ಒಳನಾಡು : ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು( ಪಾವಗಢ ಸಹಿತ), ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡ ಇರಲಿದ್ದು ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಚಾಮರಾಜನಗರ, ಹಾಸನ, ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ಮುಂದಿನ 10 ದಿನಗಳ ತನಕವೂ ಅಲ್ಲಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆಗಳಿವೆ.
ಜಪಾನ್ ತೀರದ ಮಹಾ ಚಂಡಮಾರುತವು ಶಿಥಿಲಗೊಂಡ ನಂತರವೂ ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯ ಕಡೆಯಿಂದ ಈಗ ಬೀಸುತ್ತಿರುವ ಗಾಳಿಯ ಚಲನೆ ಯಥಾವತ್ತಾಗಿ ಮುಂದುವರಿಯುವಂತೆ ತೋರುತ್ತಿದ್ದು, ಮುಂಗಾರು ಪ್ರಭಲಗೊಳ್ಳುವ ಲಕ್ಷಣಗಳು ತಡವಾಗಬಹುದು ಅಥವಾ ಹೀಗೆ ಮುಂದುವರಿಯುವ ಸಾಧ್ಯತೆಯೂ ಇದೆ.
No comments:
Post a Comment