Advertise

10 August 2026

11.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

11.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಇರಲಿದ್ದು, ದಿನದಲ್ಲಿ ಎರಡು, ಮೂರು ಸಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಒಂದೆರಡು ಮಳೆ ಹೆಚ್ಚಿರಬಹುದು. 
ಈಗಿನಂತೆ ಮಧ್ಯಪ್ರದೇಶ ರಾಜ್ಯದಲ್ಲಿ ಹೊಸದಾಗಿ ಉಂಟಾದ ತಿರುವಿಕೆಯ ಕಾರಣದಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರಂದು ಮಳೆ ಸ್ವಲ್ಪ ಹೆಚ್ಚಿರುವ ಸಾಧ್ಯತೆಗಳಿವೆ. ನಂತರ ಕಡಿಮೆಯಾದರೂ ಮುಂದಿನ 10 ದಿನಗಳವರೆಗೂ ದಿನದಲ್ಲಿ ಅಲ್ಲಲ್ಲಿ ಎರಡು, ಮೂರು ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು, ಹಾಸನದ ಸಕ್ಲೇಶ್ಪುರ ಸುತ್ತಮುತ್ತ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ, ಮಧ್ಯಪ್ರದೇಶ ತಿರುವಿಕೆಯ ಕಾರಣದಿಂದ ಆಗಸ್ಟ್ 11ರಂದು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉತ್ತರ ಒಳನಾಡು : ಹಾವೇರಿ, ಗದಗ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 
ಈಗಿನಂತೆ ಮುಂದಿನ 10 ದಿನಗಳವರೆಗೂ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. 

ದಕ್ಷಿಣ ಒಳನಾಡು : ಮೈಸೂರಿನ ಒಂದೆರಡು ಕಡೆ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಉತ್ತರ ಭಾರತದ ಮಧ್ಯಪ್ರದೇಶದಲ್ಲಿ ಹೊಸದಾಗಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದರಿಂದ ರಾಜ್ಯದ ಕರಾವಳಿ, ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 11ರಂದು ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.

No comments:

Post a Comment

24.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ...