Advertise

11 August 2026

12.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

12.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ದಿನದಲ್ಲಿ ಎರಡು ಅಥವಾ ಮೂರು ಸಣ್ಣ ಅವಧಿಯ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಹಾಗೂ ಅದರ ಸುತ್ತಮುತ್ತ ಒಂದೆರಡು ಮಳೆ ಹೆಚ್ಚಿರಬಹುದು. ಬಿಡುವಿನ ಸಮಯ ಹೆಚ್ಚಿರುವುದರಿಂದ ತೋಟಗಳಿಗೆ ಔಷಧಿ ಸಿಂಪಡಿಸಲು ಅಷ್ಟೇನು ಸಮಸ್ಯೆ ಆಗಲಾರದು.
ಈಗಿನಂತೆ ಇದೇ ವಾತಾವರಣವು ಆಗಸ್ಟ್ 19ರ ತನಕ ಮುಂದುವರಿಯುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಒಂದೆರಡು ಸಣ್ಣ ಅವಧಿಯ ಸಮಾನ್ಯ ಮಳೆಯ ಮುನ್ಸೂಚನೆ ಇದೆ. ಇತರ ಭಾಗಗಳಲ್ಲಿ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 12ರಿಂದ ದಿನದ ಹೆಚ್ಚಿನ ಅವಧಿಯೂ ಬಿಸಿಲು ಹಾಗೂ ಮೋಡ ಒಂದೆರಡು ತುಂತುರು ಮಳೆಯ ಸಾಧ್ಯತೆಗಳಿವೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬಾಗಲಕೋಟೆ, ಗದಗ, ವಿಜಯಪುರ, ಕೊಪ್ಪಳ, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು  ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 2 ಅಥವಾ 3 ದಿನಗಳ ಕಾಲ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರಿನ ಒಂದೆರಡು ಕಡೆ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಹಾಗೂ ದಾವಣಗೆರೆ, ವಿಜಯನಗರ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಮಧ್ಯಪ್ರದೇಶದ ತಿರುವಿಕೆ ಹಾಗೂ ಬಾಂಗ್ಲಾದೇಶ ಕರಾವಳಿಯಲ್ಲಿ ಹೊಸದಾಗಿ ಉಂಟಾದ ತಿರುವಿಕೆ ಮುಂಗಾರು ಮೇಲೆ ಅಷ್ಟೇನು ಪರಿಣಾಮ ಬೀರುವ ಸಾಧ್ಯತೆ ಕಾಣಿಸುತ್ತಿಲ್ಲ.
ಮಧ್ಯಮ ಸ್ತರದಲ್ಲಿ ಮಾರುತಗಳು ಅರಬ್ಬಿ ಸಮುದ್ರ, ಬಂಗಾಳಕೊಲ್ಲಿಯ ಮೂಲಕ ಫೆಸಿಫಿಕ್ ಸಾಗರದತ್ತ ಸಾಗುತ್ತಿವೆ. ಈ ಕಾರಣದಿಂದ ಮುಂದಿನ 10 ದಿನಗಳವರೆಗೂ ಬಂಗಾಳಕೊಲ್ಲಿಯಲ್ಲಿ ಯಾವುದೇ ತಿರುವಿಕೆ ಅಥವಾ ವಾಯುಭಾರ ಕುಸಿತದಂತಹ ವಿದ್ಯಮಾನಗಳು ಸಂಭವಿಸುವ ಸಾಧ್ಯತೆಗಳು ಕಡಿಮೆಯಾಗಿದೆ. 

No comments:

Post a Comment

24.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ...