Advertise

12 August 2026

13.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬೆಳಿಗ್ಗೆ ಅಲ್ಲಲ್ಲಿ ಸಾಮಾನ್ಯ ಮಳೆ, ನಂತರ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.  ಬಿಡುವಿನ ಅವಧಿ ಸ್ವಲ್ಪ ಹೆಚ್ಚಿರಬಹುದು. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಮಳೆ ಸ್ವಲ್ಪ ಹೆಚ್ಚಿರಬಹುದು. 
ಈಗಿನಂತೆ ಆಗಸ್ಟ್ 18ರ ತನಕ ಇದೇ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. ನಂತರ ಬಿಸಿಲು ಹಾಗೂ ಮೋಡ ಹೆಚ್ಚಿರಬಹುದು. (ಆದರೆ 21ರಿಂದ ಮಳೆ ಆರಂಭವಾಗುವ ಸಾಧ್ಯತೆಗಳಿವೆ. ಬದಲಾಗಬಹುದು.) 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ದಿನದಲ್ಲಿ ಎರಡು, ಮೂರು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು, ಮೋಡ ಹಾಗೂ ಮಧ್ಯಾಹ್ನ ನಂತರ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದ್ದು, ಗದಗ, ಬಾಗಲಕೋಟೆ, ಬಳ್ಳಾರಿ, ಕೊಪ್ಪಳ, ವಿಜಯಪುರ, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಗುಡುಗು ಸಹ ಇರಬಹುದು. ಉಳಿದ ಜಿಲ್ಲೆಗಳಲ್ಲಿ ಗಾಳಿಯ ಒತ್ತಡ ಹೆಚ್ಚಿದ್ದರೆ ಮಾತ್ರ ಸಣ್ಣ ಪ್ರಮಾಣದ ಮಳೆಯ ಸಾಧ್ಯತೆಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ದಾವಣಗೆರೆ, ವಿಜಯನಗರ, ತುಮಕೂರು, ಬೆಂಗಳೂರು ಹಾಗೂ ಮೈಸೂರಿನ ಒಂದೆರಡು ಕಡೆ ಮಧ್ಯಾಹ್ನ ನಂತರ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. 

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ಮೇಲ್ಮೈ ಸುಳಿಗಾಳಿ ಉಂಟಾಗಿದ್ದರ ಪರಿಣಾಮ ಕಾದು ನೋಡಬೇಕಾಗಿದೆ. ಆದರೆ ಅರಬ್ಬಿ ಸಮುದ್ರದಲ್ಲಿ ತೇವಾಂಶ ಭರಿತ ಮೋಡಗಳು ಕಡಿಮೆಯಾಗಿದ್ದು, ಸಾಗಿಬರುವ ಅಲ್ಪ ಸ್ವಲ್ಪ ಮೋಡದೊಂದಿಗೆ ಅಧಿಕ ತಾಪಮಾನದ ಕಾರಣದಿಂದ ಸ್ಥಳೀಯ ಮೋಡಗಳೂ ಸೇರಿಕೊಂಡು ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. 
ಸಧ್ಯದಲ್ಲಿ ಯಾವುದೇ ತಿರುವಿಕೆ ಅಥವಾ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳು ಕಾಣುತ್ತಿಲ್ಲ. 

No comments:

Post a Comment

23.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

23.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ...