Advertise

13 August 2026

14.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

14.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ದಿನದಲ್ಲಿ ಎರಡು, ಮೂರು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಸುಳ್ಯ ತಾಲ್ಲೂಕು ಹಾಗೂ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಮಧ್ಯಾಹ್ನ ನಂತರ ಒಂದೆರಡು ಮಳೆ ಹೆಚ್ಚಿರಬಹುದು. 
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಇದೇ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನದ ಸಕ್ಲೇಶ್ಪುರ ಸುತ್ತಮುತ್ತ ಪ್ರದೇಶದಲ್ಲಿ ಅಲ್ಲಲ್ಲಿ ದಿನದಲ್ಲಿ ಎರಡು ಅಥವಾ ಮೂರು ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಮಳೆ ಹೆಚ್ಚಿರಬಹುದು.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಕಡಿಮೆಯಾದರೂ ಮುಂದಿನ 10 ದಿನಗಳವರೆಗೂ ದಿನದಲ್ಲಿ ಎರಡು, ಮೂರು ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆ ಕಡಿಮೆಯಾದರೂ ಆಗಸ್ಟ್ 18ರಿಂದ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ದಾವಣಗೆರೆ, ವಿಜಯನಗರ, ಮೈಸೂರು, ಮಂಡ6, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.  ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ತುಂತುರು ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಒಳ ನುಗ್ಗಿದ ತಿರುಗುವಿಕೆಯ ಪರಿಣಾಮದಿಂದ ಅಷ್ಟೇನು ಇಲ್ಲದಿದ್ದರೂ ರಾಜ್ಯದಲ್ಲಿ ಸಾಮಾನ್ಯ ಮಳೆ ಮುಂದುವರಿಯಲು ಸಹಕಾರಿಯಾಗುವ ಸಾಧ್ಯತೆಗಳಿವೆ. 

No comments:

Post a Comment

23.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

23.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ...