Advertise

15 August 2026

16.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

16.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಆಗಾಗ ಸಣ್ಣ ಅವಧಿಯ ಸಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಒಂದೆರಡು ಮಳೆ ಹೆಚ್ಚಿರಬಹುದು. ( ಮಧ್ಯಮ ಸ್ತರದ ಮೋಡಗಳ ಪ್ರಭಾವ ಹೆಚ್ಚಿರುವುದರಿಂದ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಹೆಚ್ಚು ಮಳೆ). 
ಈಗಿನಂತೆ ಮುಂದಿನ 10 ದಿನಗಳವರೆಗೂ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇದೇ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು, ಸಕ್ಲೇಶ್ಪುರ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದು,  ಮುಂದಿನ 10 ದಿನಗಳವರೆಗೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯಾಗುವ ಸೂಚನೆಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಗದಗ, ಹಾವೇರಿ, ಬಳ್ಳಾರಿ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್ 19ರಿಂದ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ಆಗಸ್ಟ್ 18ರಿಂದ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ. 

ಪಶ್ಚಿಮ ಬಂಗಾಳದಲ್ಲಿ ಮಧ್ಯಮ ಸ್ತರದ ಗಾಳಿಯ ತಿರುಗುವಿಕೆಯಿಂದ ಒಡಿಸ್ಸಾ, ಜಾರ್ಖಂಡ್, ಛತ್ತೀಸಗಡ, ಮಧ್ಯಪ್ರದೇಶ  ರಾಜ್ಯಗಳ ಲಕ್ಷಣಗಳಿಲ್ಲ ಹೆಚ್ಚು ಮಳೆಯಾಗುತ್ತಿದೆ. 
ಇದರ ಜೊತೆಗೆ ಬಂಗಾಳಕೊಲ್ಲಿಯ ತೇವಾಂಶ ಭರಿತ ಮೋಡಗಳು ನಿರಂತರವಾಗಿ ಫೆಸಿಫಿಕ್ ಮಹಾಸಾಗರದ ಕಡೆಗೆ ಚಲಿಸುತ್ತಿರುವುದರಿಂದ ರಾಜ್ಯದ ಮಲೆನಾಡು, ಒಳನಾಡು ಜಿಲ್ಲೆಗಳಲ್ಲಿಯೂ ಮಳೆ ಕಡಿಮೆಯಾಗಿದೆ. 


No comments:

Post a Comment

23.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

23.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ...