Advertise

16 August 2026

17.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

 ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಹಾಗೂ ಸುತ್ತಮುತ್ತ ಒಂದೆರಡು ಮಳೆ ಹೆಚ್ಚಿರಬಹುದು. 
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ಇ 24ರ ತನಕ ಇದೇ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. ನಂತರ ಇಡೀ ದಿನ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 

ಮಲೆನಾಡು : ಕೊಡಗು ಜಿಲ್ಲೆಯ ಭಾಗಮಂಡಲ, ತಲಕಾವೇರಿ ಸುತ್ತಮುತ್ತ ಭಾಗಗಳಲ್ಲಿ ದಿನದಲ್ಲಿ ಒಂದೆರಡು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಸಕ್ಲೇಶ್ಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ. 
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 24ರ ತನಕವೂ ಇದೇ ವಾತಾವರಣ ಮುಂದುವರಿಯುವ ಲಕ್ಷಣಗಳಿದ್ದು, ನಂತರ ಬಿಸಿಲಿನ ಅವಧಿ ಹೆಚ್ಚಿರಬಹುದು. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಗದಗ ಹಾಗೂ ಬಳ್ಳಾರಿ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಇರಬಹುದು. 
ಈಗಿನಂತೆ ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆ ಮುಂದುವರಿಯಲಿದ್ದು, ಆಗಸ್ಟ್ 19ರಿಂದ ಮಳೆಯ ವ್ಯಾಪ್ತಿ ಹಾಗೂ ಪ್ರಮಾಣ ಸ್ವಲ್ಪ ಹೆಚ್ಚಾಗುವ ನಿರೀಕ್ಷೆ ಇದೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇವತ್ತು ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಹೆಚ್ಚಿನ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ  ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್ 18ರಿಂದ 3 ಅಥವಾ 4 ದಿನಗಳ ಕಾಲ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

 ಮಧ್ಯಮ ಸ್ತರದಲ್ಲಿ ಉತ್ತರ ಪಶ್ಚಿಮ ಏಷ್ಯಾ ಹಾಗೂ ಯುರೋಪ್ ಕಡೆಯಿಂದ ಅರಬ್ಬಿ ಸಮುದ್ರದ ಕಡೆಗೆ ಶುಶ್ಕ ಗಾಳಿಯ ಬೀಸುವಿಕೆ ಪ್ರಭಲಗೊಳ್ಳುತ್ತಿದೆ. ( ಜೂನ್ ಮೂರನೇ ವಾರದಲ್ಲಿ ಇದ್ದಂತಹ ಪರಿಸ್ಥಿತಿ). ಇದರಿಂದ ಮುಂಗಾರು ದುರ್ಬಲಗೊಂಡಂತೆ ತೋರುತ್ತಿದೆ. 
ಯುರೋಪ್ ಖಂಡದ ಹಲವೆಡೆ ಈಗಾಗಲೇ ಉಷ್ಣ ಮಾರುತಗಳು ಬೀಸುತ್ತಿರುವುದರಿಂದ ಸಾಮಾನ್ಯ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಕೆಲವು ದೇಶಗಳಲ್ಲಿ ತಾಪಮಾನ 37°C ಗಿಂತಲೂ ಅಧಿಕವಾಗಿದೆ. 

No comments:

Post a Comment

23.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

23.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ...