Advertise

17 August 2026

18.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

 ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಒಂದೆರಡು ಮಳೆ ಹೆಚ್ಚಿರಬಹುದು. ಬಿಡುವಿನ ಸಮಯ ಹೆಚ್ಚಿರುವುದರಿಂದ ತೋಟಗಳಿಗೆ ಔಷಧಿ ಸಿಂಪಡಿಸಲು ಹೆಚ್ಚು ತೊಂದರೆಯಾಗದು.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಇದೇ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನದ ಸಕ್ಲೇಶ್ಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದೊಂದಿಗೆ ತುಂತುರು ಮಳೆಯ ಮುನ್ಸೂಚನೆ ಇದೆ. ಆದರೆ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 20ರಿಂದ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿವೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳ ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ 19ರಿಂದ 2 ದಿವಸಗಳ ಕಾಲ ಅಲ್ಲಲ್ಲಿ ಮಳೆಯ ಸಾಧ್ಯತೆಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಹಾಸನ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಆಗಸ್ಟ್ 19ರಿಂದ 21ರ ತನಕ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯ ಮಾರುತಗಳು ನಿರಂತರವಾಗಿ ಫೆಸಿಫಿಕ್ ಸಾಗರದ ಕಡೆಗೆ ಚಲಿಸುತ್ತಿರುವುದರಿಂದ ಬಾಂಗ್ಲಾದೇಶದ ತಿರುವಿಕೆಯು ಅಷ್ಟೇನು ಪರಿಣಾಮ ಬೀರುವ ಸಾಧ್ಯತೆಗಳು ಕಾಣುತ್ತಿಲ್ಲ. 

No comments:

Post a Comment

23.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

23.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ...