Advertise

18 August 2026

19.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಒಂದೆರಡು ಮಳೆಯ ಮುನ್ಸೂಚನೆ ಇದೆ ಕರಾವಳಿ ತೀರದ ಭಾಗಗಳಲ್ಲಿ ಬಿಸಿಲು ಇರಬಹುದು. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಹಾಗೂ ಸುತ್ತಮುತ್ತ ಒಂದೆರಡು ಮಳೆ ಹೆಚ್ಚಿರಬಹುದು. 
ಈಗಿನಂತೆ ಮುಂದಿನ 10 ದಿನಗಳವರೆಗೂ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇದೇ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಸಕ್ಲೇಶ್ಪುರ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಆಗಸ್ಟ್ 21ರಿಂದ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳಿವೆ. 

ಉತ್ತರ ಒಳನಾಡು :ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಬಳ್ಳಾರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಗಾಳಿಯ ಒತ್ತಡ ಹೆಚ್ಚಿದ್ದರೆ ಒಂದೆರಡು ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. 
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 2 ರಿಂದ 3 ದಿವಸಗಳ ಕಾಲ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಹಾಗೂ ಚಾಮರಾಜನಗರದ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಗಾಳಿಯ ಒತ್ತಡ ಹೆಚ್ಚಿದ್ದರೆ ಮಾತ್ರ ಒಂದೆರಡು ಕಡೆ ಮಳೆಯ ಸಾಧ್ಯತೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 2, 3 ದಿವಸಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. 

ಪಶ್ಚಿಮ ಬಂಗಾಳ, ಒಡಿಸ್ಸಾ ತಲಪಿರುವ ತಿರುಗುವಿಕೆಯಿಂದ ರಾಜ್ಯಕ್ಕೆ ಹೆಚ್ಚಿನ ಪರಿಣಾಮಗಳು ಕಾಣಿಸುತ್ತಿಲ್ಲ. 
ಇದರಿಂದ ಮಧ್ಯಪ್ರದೇಶ, ಉತ್ತರ ತೆಲಂಗಾಣ, ಒಡಿಸ್ಸಾ, ಛತ್ತೀಸಗಡ, ಜಾರ್ಖಂಡ್ ರಾಜ್ಯಗಳಲ್ಲಿ ಉತ್ತಮ ಮಳೆಯಾಗುತ್ತಿದೆ. 

No comments:

Post a Comment

23.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

23.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ...