Advertise

19 August 2026

20.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಇವತ್ತು ಮುಂಜಾನೆ ಕರಾವಳಿ ತೀರ ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯಾಗಿತ್ತು.
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಇಡೀ ದಿನ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕೆಲವು ಭಾಗಗಳಲ್ಲಿ ಒಂದೆರಡು ಮಳೆಯ ಸಾಧ್ಯತೆಗಳಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಒಂದೆರಡು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಒಂದೆರಡು ಮಳೆ ಹೆಚ್ಚಿರಬಹುದು. ಮೋಡದ ಚಲನೆ ವಾಯವ್ಯದಿಂದ ಆಗ್ನೇಯಕ್ಕೆ ಇರುವುದರಿಂದ ಸುಳ್ಯ, ಸುಬ್ರಮಣ್ಯ ಸುತ್ತಮುತ್ತ ಪ್ರದೇಶಗಳಲ್ಲಿ ಹೆಚ್ಚು ಮೋಡ ಹಾಗೂ ಒಂದೆರಡು ಮಳೆ ಹೆಚ್ಚಿರಬಹುದು. 
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಬಿಸಿಲು, ಮೋಡ ಹಾಗೂ ದಿನದಲ್ಲಿ ಒಂದೆರಡು ಮಳೆಯಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಸೋಮವಾರಪೇಟೆ ತಾಲ್ಲೂಕಿನಲ್ಲಿ ಸ್ವಲ್ಪ ಹೆಚ್ಚಿರಬಹುದು. ಸಕ್ಲೇಶ್ಪುರ ಸುತ್ತಮುತ್ತ ಮೋಡ ಹಾಗೂ ಒಂದೆರಡು ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ  ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಬಿಟ್ಟು ಬಿಟ್ಟು ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಆಗಸ್ಟ್ 21ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಬಳ್ಳಾರಿ, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ಆಗಸ್ಟ್ 21ರಿಂದ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್ 26ರ ತನಕವೂ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಜಾರ್ಖಂಡ್ ತಲಪಿರುವ ತಿರುಗುವಿಕೆಯು ದುರ್ಬಲಗೊಳ್ಳುವ ಲಕ್ಷಣಗಳಿವೆ. 
ಚೀನಾದ ದಕ್ಷಿಣ ಭಾಗದಲ್ಲಿ ವಿಯೆಟ್ನಾಂ, ಮ್ಯಾನ್ಮಾರ್ ದೇಶಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಬೃಹತ್ ತಿರುಗುವಿಕೆಯ ಕಾರಣದಿಂದ ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯ ತೇವಾಂಶವು ನಿರಂತರವಾಗಿ ಫೆಸಿಫಿಕ್ ಸಾಗರದ ಕಡೆಗೆ ಚಲಿಸುತ್ತಿರುವುದರಿಂದ ಮುಂಗಾರು ದುರ್ಬಲಗೊಂಡಿದೆ. 

No comments:

Post a Comment

23.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

23.08.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ...