ಕರಾವಳಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದೊಂದಿಗೆ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಆದರೆ ಮೋಡದ ಚಲನೆಯು ವಾಯವ್ಯದಿಂದ ಆಗ್ನೇಯಕ್ಕೆ ಇರುವುದರಿಂದ ಸುಳ್ಯ ತಾಲ್ಲೂಕು ಹಾಗೂ ಕಡಬ ತಾಲೂಕುಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಸಾಧ್ಯತೆಗಳಿವೆ. ಕಾಸರಗೋಡು ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ಜೊತೆಗೆ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿಯ ಹೆಬ್ರಿ, ಕಾರ್ಕಳ ಸುತ್ತಮುತ್ತ ಮೋಡದೊಂದಿಗೆ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡ ಇರಲಿದ್ದು ಒಂದೆರಡು ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ದಿನದಲ್ಲಿ ಒಂದೆರಡು ಮಳೆ ಮುಂದುವರಿಯುವ ಲಕ್ಷಣಗಳಿವೆ. ಆಗಸ್ಟ್ 23 ರಿಂದ 25ರ ತನಕ ಮಳೆ ಸ್ವಲ್ಪ ಹೆಚ್ಚಿರುವ ಮುನ್ಸೂಚನೆ ಇದೆ.
ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಮಡಿಕೇರಿ, ಭಾಗಮಂಡಲ, ತಲಕಾವೇರಿ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಹಾಸನದ ಸಕ್ಲೇಶ್ಪುರ ಸುತ್ತಮುತ್ತ ಒಂದೆರಡು ತುಂತುರು ಮಳೆ ಸಾಧ್ಯತೆ ಇದ್ದರೆ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 25ರ ತನಕವೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿದ್ದು, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಜಿಲ್ಲೆಗಳ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್ 23 ರಿಂದ 25ರ ತನಕ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇವತ್ತು ಮುಂಜಾನೆ ಈಗಾಗಲೇ ಮಳೆಯಾಗಿದ್ದು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ದಾವಣಗೆರೆ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್ 21ರಿಂದ ಮಳೆ ಕಡಿಮೆಯಾದರೂ, 23ರಿಂದ 25ರ ತನಕ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉತ್ತರ ಭಾರತದ ತಿರುವಿಕೆಯು ಉತ್ತರ ಪ್ರದೇಶ, ಮಧ್ಯಪ್ರದೇಶ, ಛತ್ತೀಸಗಡ ರಾಜ್ಯಗಳಲ್ಲಿ ಉತ್ತಮ ಮಳೆಗೆ ಕಾರಣವಾಗಿದ್ದು, ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ.
No comments:
Post a Comment