ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಣ್ಣ ಅವಧಿಯ ಬಿಟ್ಟು ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ತೀರ ಭಾಗಗಳಲ್ಲಿ ಒಂದೆರಡು ಮಳೆ ಹೆಚ್ಚಿರಬಹುದು. ಕಾರ್ಕಳ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಒಂದೆರಡು ಮಳೆ ಹೆಚ್ಚಿರಬಹುದು.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 3 ರ ತನಕ ಇದೇ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಎರಡು ಮೂರು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ಒಂದೆರಡು ತುಂತುರು ಮಳೆಯ ಸಾಧ್ಯತೆಗಳಿವೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 2 ಹಾಗೂ 3ರಂದು ಮಳೆಯ ಪ್ರಮಾಣ ಹೆಚ್ಚಿರುವ ಸಾಧ್ಯತೆಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಗದಗ, ಬಳ್ಳಾರಿ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾವೇರಿ, ಬಾಗಲಕೋಟೆ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯಲಿದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸೆಪ್ಟೆಂಬರ್ 3ರಿಂದ ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳ ಅಲ್ಲಲ್ಲಿ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 2ರಿಂದ ಅಲ್ಲಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ.
ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಮಧ್ಯಮ ಸ್ತರದಲ್ಲಿ ಈಗಾಗಲೇ ತಿರುವಿಕೆ ಉಂಟಾಗಿದ್ದು, ಇದರ ಪ್ರಭಾವದಿಂದ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಲಕ್ಷಣಗಳಿವೆ.
No comments:
Post a Comment