Advertise

07 September 2026

08.09.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

08.09.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 8 ರಿಂದ 10ರ ತನಕ ಮೋಡ ಹೆಚ್ಚಿರಿವ ಸಾಧ್ಯತೆಗಳಿದ್ದು ಅಲ್ಲಲ್ಲಿ ತುಂತುರು, ಸಾಮಾನ್ಯ ಮಳೆಯ ಸೂಚನೆಗಳಿವೆ. 

ಮಲೆನಾಡು : ಕೊಡಗು ಜಿಲ್ಲೆಯ ಕೇರಳ ಗಡಿಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಣ್ಣ ಪ್ರಮಾಣದ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 16ರ ತನಕ ಅಲ್ಲಲ್ಲಿ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಇವತ್ತು ಹಾಗೂ ನಾಳೆ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಸಾಧ್ಯತೆಗಳಿದ್ದು, ನಂತರ ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ. ಸೆಪ್ಟೆಂಬರ್ 14ರಿಂದ ಮುಂದಿನ ಮೂರು ದಿನಗಳ ಕಾಲ ಅಲ್ಲಲ್ಲಿ ಮಳೆಯ ಸಾಧ್ಯತೆಗಳಿವೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರಿನ ಒಂದೆರಡು ಕಡೆ ತುಂತುರು ಹಾಗೂ ಚಾಮರಾಜನಗರ ಜಿಲ್ಲೆಯ ತಮಿಳುನಾಡು ಗಡಿ ಭಾಗಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 13 ಹಾಗೂ 14ರಂದು ಅಲ್ಲಲ್ಲಿ ಮಳೆಯ ಸಾಧ್ಯತೆಗಳಿವೆ.

ಎಲ್ ನಿನೋ ಪರಿಣಾಮದಿಂದ ಹಿಂಗಾರು ಪರಿಸ್ಥಿತಿ ಕಾದು ನೋಡಬೇಕಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದರೆ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆಯಾಗಬಹುದು. ಮುಂದಿನ ದಿನಗಳಲ್ಲಿ ಬಂಗಾಳಕೊಲ್ಲಿಯಲ್ಲಿಯ ವಾಯುಭಾರ ಕುಸಿತವು ತಮಿಳುನಾಡು, ಆಂದ್ರಾ ಮೂಲಕ ಭೂ ಪ್ರವೇಶಿಸಿದರೆ ಅಥವಾ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದರೆ ಮಾತ್ರ ಹಿಂಗಾರು  ಚುರುಕಾಗಿ ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗಬಹುದು. 

06 September 2026

07.09.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.09.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಸೆಪ್ಟೆಂಬರ್ 8ರಿಂದ 10ರ ತನಕ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.

ಮಲೆನಾಡು :  ಕೊಡಗು ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ಸೆಪ್ಟೆಂಬರ್ 8 ರಿಂದ 10ರ ತನಕ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಬೀದರ್ ಜಿಲ್ಲೆಯ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಕಡಿಮೆಯಾಗುತ್ತಿದೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಗುಡುಗು ಸಾಧ್ಯತೆಯೂ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳಲ್ಲೂ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆಗಳಿವೆ.

ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯ ಗಾಳಿಯು ಫೆಸಿಫಿಕ್ ಮಹಾಸಾಗರದ ಕಡೆಗೆ ನಿರಂತರವಾಗಿ ಚಲಿಸುತ್ತಿದೆ. ಈ ಸಂಚಾರವು ಹೀಗೆ ಮುಂದುವರಿದರೆ ಹಿಂಗಾರು ಮಾರುತಗಳಿಗೆ ಹಿನ್ನಡೆ ಉಂಟಾಗಬಹುದು. ಪರಿಸ್ಥಿತಿ ಕಾದು ನೋಡಬೇಕಾಗಿದೆ. 

05 September 2026

06.09.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

06.09.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ವಾತಾವರಣದ ತೇವಾಂಶ ಕಡಿಮೆಯಾಗತೊಡಗಿದೆ. 
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 8ರಿಂದ ಎರಡು ಅಥವಾ ಮೂರು ದಿನಗಳ ತನಕ ಅಲ್ಲಲ್ಲಿ ಮಳೆಯ ಸಾಧ್ಯತೆಗಳಿವೆ. ನಂತರ ಒಣ ಹವೆ ಆವರಿಸುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಗುಡುಗು ಸಾಧ್ಯತೆಯೂ ಇದೆ. (ಮೂಡಿಗೆರೆ, ಸುತ್ತಮುತ್ತ ಉತ್ತಮ ಮಳೆಯ ಮುನ್ಸೂಚನೆ ಇದೆ) 
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 2 ದಿವಸಗಳ ಕಾಲ ಮಳೆ ಕಡಿಮೆಯಾಗಲಿದ್ದು ಸೆಪ್ಟೆಂಬರ್ 8ರಿಂದ ಮಳೆ ಹೆಚ್ಚಾಗುವ ಲಕ್ಷಣಗಳಿವೆ. ಶಿವಮೊಗ್ಗ ಜಿಲ್ಲೆಯಲ್ಲಿ ಸೆಪ್ಟೆಂಬರ್ 12ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿದ್ದರೆ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ 14ರ ತನಕ ಇರಬಹುದು. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ ಅಥವಾ ಸಂಜೆ ಮಳೆಯ ಮುನ್ಸೂಚನೆ ಇದೆ. 
ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಮುನ್ಸೂಚನೆ ಇದ್ದರೂ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಜಿಲ್ಲೆಗಳ ಹೊರತಾಗಿ ಉಳಿದ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆಗಳು ಕಡಿಮೆಯಾಗುವ ಸೂಚನೆಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಬೆಂಗಳೂರು ಉತ್ತರ ಹಾಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 2 ದಿವಸಗಳ ಕಾಲ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಗಳಿದ್ದು, 8 ರಿಂದ ಅಲ್ಲಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಲಕ್ಷಣಗಳಿವೆ. 

ಮುಂಗಾರು ದುರ್ಬಲಗೊಂಡಿದ್ದು, ರಾಜ್ಯದ ಮಲೆನಾಡು, ಒಳನಾಡು ಜಿಲ್ಲೆಗಳಲ್ಲಿ ಅವಧಿಗೂ ಮುನ್ನವೇ ಗುಡುಗು ಮಳೆ ಆರಂಭವಾಗುವ ಸಾಧ್ಯತೆಗಳು ಕಾಣಿಸುತ್ತಿವೆ. 
ಫೆಸಿಫಿಕ್ ಮಹಾಸಾಗರದ ಉಷ್ಣಾಂಶ ಏರ ತೊಡಗಿದ್ದು, ಈಗಾಗಲೇ ಮೂರು ನಾಲ್ಕು ಪ್ರಭಲ ಚಂಡಮಾರುತಗಳು ಉಂಟಾಗಿದೆ. 
ಒಕ್ಟೊಬರ್, ನವೆಂಬರ್ ತಿಂಗಳಲ್ಲಿ ಎಲ್ ನಿನೋ ತೀವ್ರ ಸ್ವರೂಪ ಪಡೆಯುವ ವರದಿಗಳಿದ್ದು, ಹಿಂಗಾರು ಮಳೆಗೆ ಯಾವ ರೀತಿಯ ಪರಿಣಾಮ ಬೀರಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ. 


04 September 2026

05.09.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

05.09.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕರಾವಳಿ ತೀರ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 3 ಅಥವಾ 4 ದಿನಗಳ ಕಾಲ ಇದೇ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. ಸೆಪ್ಟೆಂಬರ್ 8 ಅಥವಾ 9ರಿಂದ ಒಂದೆರಡು ದಿನ ಮಳೆಯ ಸಾಧ್ಯತೆಗಳಿವೆ. 

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಹಾಗೂ ಚಿಕ್ಕಮಗಳೂರಿನ ಒಂದೆರಡು ಕಡೆ ಸಂಜೆ ಮಳೆಯ ಮುನ್ಸೂಚನೆ ಇದೆ. ಗುಡುಗು ಸಾಧ್ಯತೆಯೂ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 4 ಹಾಗೂ 5ರಂದು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ನಂತರ ಕಡಿಮೆಯಾಗಬಹುದು.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಾಗಲಕೋಟೆಯ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ
ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ಸೆಪ್ಟೆಂಬರ್ 4ರಿಂದ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ. 
ಈಗಿನಂತೆ  ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 10ರ ತನಕವೂ ಕಲ್ಯಾಣ ಕರ್ನಾಟಕ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಹಾಸನ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಹಾಗೂ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಗುಡುಗು ಸಹಿತ ಮಳೆಯ ಸಾಧ್ಯತೆಗಳು ಕಾಣುತ್ತಿವೆ.

ಮುಂಗಾರು ದುರ್ಬಲಗೊಂಡಿದ್ದರಿಂದ ಮುಂದಿನ ದಿನಗಳಲ್ಲಿ ಅವಧಿಗೂ ಮುನ್ನವೇ ಮಲೆನಾಡು ಹಾಗೂ ಒಳನಾಡು ಜಿಲ್ಲೆಗಳಲ್ಲಿ ಈಗಿನ ಅಲ್ಪ ಸ್ವಲ್ಪ ಮೋಡದೊಂದಿಗೆ ಸ್ಥಳೀಯ ಮೋಡಗಳೂ ಸೇರಿಕೊಂಡು ಗುಡುಗು ಸಹಿತ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ಇದರ ಪ್ರಭಾವದಿಂದ ಸುಮಾರು ಸೆಪ್ಟೆಂಬರ್ 10ರ ನಂತರ ಕರಾವಳಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸಹ ಗುಡುಗು ಮಳೆಯ ಸಾಧ್ಯತೆಗಳಿವೆ. 

03 September 2026

04.09.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

04.09.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಸೆಪ್ಟೆಂಬರ್ 5ರಿಂದ ಮೂರು ದಿನಗಳ ಕಾಲ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ನಂತರ ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆಯ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಹಾವೇರಿ ಹಾಗೂ ದಾವಣಗೆರೆ ಜಿಲ್ಲೆಗಳ ಗಡಿ ಭಾಗಗಳ ಸುತ್ತಮುತ್ತ ಸಹ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಸೆಪ್ಟೆಂಬರ್ 5ರಿಂದ 7ರ ತನಕ ಬಿಸಿಲು ಹಾಗೂ ಮೋಡದ ವಾತಾವರಣ ಇರಬಹುದು. ನಂತರ ಮತ್ತೆ ಮಳೆಯ ಸಾಧ್ಯತೆಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಗದಗ, ಬಾಗಲಕೋಟೆ, ವಿಜಯಪುರ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 8ರ ತನಕ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ಮೈಸೂರು ಹಾಗೂ ಬೆಂಗಳೂರು ಉತ್ತರ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದಂತೆ ಇತರ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಮಳೆಯ ಸಾಧ್ಯತೆಗಳಿವೆ.

ಉತ್ತರ ಭಾರತದ ವಾಯುಭಾರ ಕುಸಿತವು ಮಧ್ಯಪ್ರದೇಶ, ಉತ್ತರ ಪ್ರದೇಶ, ಉತ್ತರಾಖಂಡ, ಹರಿಯಾಣ ರಾಜ್ಯಗಳಿಗೆ ತಲುಪಿದ್ದು, ಆ ರಾಜ್ಯಗಳಲ್ಲಿ ಭಾರಿ ಮಳೆಯ ನಿರೀಕ್ಷೆ ಇದೆ. 

02 September 2026

03.09.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

03.09.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚೆನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಒಂದ ಸಣ್ಣ ಅವಧಿಯ ಸಮಾನ್ಯ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೋರು ಮಳೆಯ ಸಾಧ್ಯತೆಗಳು ಕಡಿಮೆಯಾಗಿದ್ದು, ಮುಂದಿನ 2 ದಿವಸಗಳ ಕಾಲ ದಿನದಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ನಂತರ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.

ಮಲೆನಾಡು : ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು, ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 2 ಅಥವಾ 3 ದಿನಗಳ ಕಾಲ ಇದೇ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. ಸೆಪ್ಟೆಂಬರ್ 5 ಅಥವಾ 6 ರಿಂದ ಮುಂದಿನ 4, 5 ದಿವಸಗಳ ಕಾಲ ಮತ್ತೆ ಮಳೆಯ ಲಕ್ಷಣಗಳಿವೆ.

ಉತ್ತರ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬೆಳಗಾವಿ, ಹಾವೇರಿ, ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ. 
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 9ರ ತನಕ ಅಲ್ಲಲ್ಲಿ ಮಳೆಯಾಗುವ ಲಕ್ಷಣಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಹಾಸನ, ಬೆಂಗಳೂರು ಉತ್ತರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ವಿಜಯನಗರ ಜಿಲ್ಲೆಗಳ ಒಂದೆರಡು ಕಡೆ, ಚಾಮರಾಜನಗರದ ಗುಂಡ್ಲುಪೇಟೆ ಸುತ್ತಮುತ್ತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಅಲ್ಲಲ್ಲಿ ಗುಡುಗು ಸಾಧ್ಯತೆಯೂ ಇದೆ. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 9ರ ತನಕ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆಗಳಿವೆ. 

ಉತ್ತರ ಭಾರತದ ವಾಯುಭಾರ ಕುಸಿತದಂತಹ ತಿರುವಿಕೆಯ ಉತ್ತರ ಪ್ರದೇಶ ತಲುಪಿದ್ದು, ಮುಂದಿನ 2 ದಿವಸಗಳಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. 

01 September 2026

02.09.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

02.09.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಸೇರಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಬಿಟ್ಟು ಬಿಟ್ಟು ಸಣ್ಣ ಹನಿ ಮಳೆಯ ಮುನ್ಸೂಚನೆ ಇದೆ. ನಡುವೆ ಬಿಡುವಿನ ಸಮಯ ಹೆಚ್ಚಿರಬಹುದು. 
ಈಗಿನಂತೆ ಸೆಪ್ಟೆಂಬರ್ 4 ರಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮತ್ತಷ್ಟು ಕಡಿಮೆಯಾಗಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. 

ಮಲೆನಾಡು : ಕೊಡಗಿನ ಭಾಗಮಂಡಲ, ತಲಕಾವೇರಿ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಸಣ್ಣ ಪ್ರಮಾಣದ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಚಿಕ್ಕಮಗಳೂರು ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಶಿವಮೊಗ್ಗ ಜಿಲ್ಲೆಯ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ಸೆಪ್ಟೆಂಬರ್ 4ರಿಂದ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಲಕ್ಷಣಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದಂತೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ದಾವಣಗೆರೆ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಮಳೆಯ ಸಾಧ್ಯತೆಗಳಿವೆ. ಜೊತೆಗೆ ಗುಡುಗು ಸಾಧ್ಯತೆಯೂ ಇದೆ. 

ಬಾಂಗ್ಲಾದೇಶ ಕರಾವಳಿಯಲ್ಲಿ ಉಂಟಾಗಿದ್ದ ವಾಯುಭಾರ ಕುಸಿತವು ಒಡಿಸ್ಸಾ, ಛತ್ತೀಸಗಡ, ಜಾರ್ಖಂಡ್, ಬಿಹಾರ, ಮಧ್ಯಪ್ರದೇಶ ಹಾಗೂ ಉತ್ತರ ಪ್ರದೇಶ ರಾಜ್ಯಗಳಿಗೆ ತಲುಪಿದ್ದು, ಆ ರಾಜ್ಯಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ. 
ಈ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದಂತೆ ರಾಜ್ಯದಲ್ಲೂ ಮಳೆಯ ಪ್ರಮಾಣ ಕಡಿಮೆಯಾಗುವ ಸೂಚನೆಗಳಿವೆ. 



08.09.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

08.09.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ...