ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಒಕ್ಟೊಬರ್ 1 ರಿಂದ ಅರಬ್ಬಿ ಸಮುದ್ರದ ಕಡೆಯಿಂದ ಬೀಸುತ್ತಿರುವ ಗಾಳಿ ದುರ್ಬಲಗೊಳ್ಳುವ ಸಾಧ್ಯತೆಗಳಿರುವುದರಿಂದ ಪೂರ್ವದ ಮೋಡಗಳಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ.
ಮಲೆನಾಡು : ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿಯೂ ಅರಬ್ಬಿ ಸಮುದ್ರದ ಗಾಳಿಯ ಪ್ರಭಾವದಿಂದ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಒಳನಾಡು ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಒಕ್ಟೊಬರ್ 1ರಿಂದ ಅರಬ್ಬಿ ಸಮುದ್ರದ ಗಾಳಿ ದುರ್ಬಲಗೊಳ್ಳುವ ಸಾಧ್ಯತೆಗಳಿರುವುದರಿಂದ ಮಲೆನಾಡು ಜಿಲ್ಲೆಗಳಲ್ಲಿ ಹೆಚ್ಚಿನ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಳ್ಳಾರಿ (ಬಳ್ಳಾರಿ ಜಿಲ್ಲೆಯಲ್ಲಿ ಈಗಾಗಲೇ ಮಳೆ ಆರಂಭವಾಗಿದೆ ) ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ದಿನ ಕಳೆದಂತೆ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಒಕ್ಟೊಬರ್ 2ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
No comments:
Post a Comment