ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 8 ರಿಂದ 10ರ ತನಕ ಮೋಡ ಹೆಚ್ಚಿರಿವ ಸಾಧ್ಯತೆಗಳಿದ್ದು ಅಲ್ಲಲ್ಲಿ ತುಂತುರು, ಸಾಮಾನ್ಯ ಮಳೆಯ ಸೂಚನೆಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯ ಕೇರಳ ಗಡಿಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಣ್ಣ ಪ್ರಮಾಣದ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 16ರ ತನಕ ಅಲ್ಲಲ್ಲಿ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಇವತ್ತು ಹಾಗೂ ನಾಳೆ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಸಾಧ್ಯತೆಗಳಿದ್ದು, ನಂತರ ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ. ಸೆಪ್ಟೆಂಬರ್ 14ರಿಂದ ಮುಂದಿನ ಮೂರು ದಿನಗಳ ಕಾಲ ಅಲ್ಲಲ್ಲಿ ಮಳೆಯ ಸಾಧ್ಯತೆಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರಿನ ಒಂದೆರಡು ಕಡೆ ತುಂತುರು ಹಾಗೂ ಚಾಮರಾಜನಗರ ಜಿಲ್ಲೆಯ ತಮಿಳುನಾಡು ಗಡಿ ಭಾಗಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 13 ಹಾಗೂ 14ರಂದು ಅಲ್ಲಲ್ಲಿ ಮಳೆಯ ಸಾಧ್ಯತೆಗಳಿವೆ.
ಎಲ್ ನಿನೋ ಪರಿಣಾಮದಿಂದ ಹಿಂಗಾರು ಪರಿಸ್ಥಿತಿ ಕಾದು ನೋಡಬೇಕಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದರೆ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆಯಾಗಬಹುದು. ಮುಂದಿನ ದಿನಗಳಲ್ಲಿ ಬಂಗಾಳಕೊಲ್ಲಿಯಲ್ಲಿಯ ವಾಯುಭಾರ ಕುಸಿತವು ತಮಿಳುನಾಡು, ಆಂದ್ರಾ ಮೂಲಕ ಭೂ ಪ್ರವೇಶಿಸಿದರೆ ಅಥವಾ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದರೆ ಮಾತ್ರ ಹಿಂಗಾರು ಚುರುಕಾಗಿ ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗಬಹುದು.
No comments:
Post a Comment